2 ಸಮುಯೇಲ 22:43 - ಪರಿಶುದ್ದ ಬೈಬಲ್43 ನಾನು ನನ್ನ ಶತ್ರುಗಳನ್ನು ತುಂಡುತುಂಡಾಗಿ ಕತ್ತರಿಸಿಹಾಕಿದೆ. ಅವರು ನೆಲದ ಮೇಲಿನ ಧೂಳಿನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಪುಡಿಪುಡಿ ಮಾಡಿದೆ ನಾನವರನು ಮಣ್ಣಿನ ಹೆಂಟೆಯಂತೆ ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಭೂವಿುಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು; ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ನಾನು ಅವರನ್ನು ನೆಲದ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು. ಅಧ್ಯಾಯವನ್ನು ನೋಡಿ |
ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.