2 ಸಮುಯೇಲ 22:48 - ಪರಿಶುದ್ದ ಬೈಬಲ್48 ನನ್ನ ಶತ್ರುಗಳನ್ನು ನನಗಾಗಿ ದಂಡಿಸುವ ದೇವರು ಆತನೇ. ಆತನು ಜನರನ್ನು ನನ್ನ ಅಧೀನತೆಗೆ ಒಳಪಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ನನ್ನ ಶತ್ರುಗಳಿಗೆ ವಿಧಿಸುವನಾ ದೇವ ಪ್ರತಿದಂಡನೆ ಜನಾಂಗಗಳನು ಅಧೀನಪಡಿಸುವನಾತ ನನಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆ ಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |
ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.