2 ಸಮುಯೇಲ 23:1 - ಪರಿಶುದ್ದ ಬೈಬಲ್1 ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು: “ದಾವೀದನು ಈ ಹಾಡನ್ನು ಹಾಡಿದನು. ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನ ಕಡೇ ಮಾತುಗಳು. ಇಷಯನ ಮಗನಾದ ದಾವೀದನ ನುಡಿಗಳು - ಉನ್ನತಸ್ಥಾನಕ್ಕೆ ಏರಿಸಲ್ಪಟ್ಟವನೂ ಯಾಕೋಬನ ದೇವರಿಂದ ಅಭೀಷೇಕಿಸಲ್ಪಟ್ಟವನೂ ಇಸ್ರಾಯೇಲ್ಯರ ವರಕವಿಯೂ ಆಗಿರುವವನು ಹೇಳಿದ್ದು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾವೀದನ ಕಡೆಯ ಮಾತುಗಳು: “ಇಷಯನ ಮಗ ದಾವೀದನ ನುಡಿಗಳಿವು: ಉನ್ನತವಾಗಿ ಸಾಗಿದ ಪುರುಷನು ಯಾಕೋಬನ ದೇವರಿಂದ ಅಭಿಷಿಕ್ತನಾದವನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ: ಅಧ್ಯಾಯವನ್ನು ನೋಡಿ |