2 ಸಮುಯೇಲ 23:16 - ಪರಿಶುದ್ದ ಬೈಬಲ್16 ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ ಬೇತ್ಲೆಹೇವಿುನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲೊಲ್ಲದೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಅಧ್ಯಾಯವನ್ನು ನೋಡಿ |
ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.