Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:20 - ಪರಿಶುದ್ದ ಬೈಬಲ್‌

20 ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಬ್ಬ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡಿಸಿದನು. ದೃಷ್ಟಾಂತ - ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:20
19 ತಿಳಿವುಗಳ ಹೋಲಿಕೆ  

ಯೋವಾಬನು ಇಸ್ರೇಲಿನ ಸೈನ್ಯಕ್ಕೆಲ್ಲ ಮುಖ್ಯ ಸೇನಾಪತಿಯಾಗಿದ್ದನು. ಕೆರೇತ್ಯರಿಗೆ ಮತ್ತು ಪೆಲೇತ್ಯರಿಗೆ ಯೆಹೋಯಾದಾವನ ಮಗನಾದ ಬೆನಾಯನು ಅಧಿಪತಿಯಾಗಿದ್ದನು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಯೆಹೂದ ಕುಲವು ನೆಗೆವ್ ದಕ್ಷಿಣಭಾಗದಲ್ಲಿದ್ದ ಎಲ್ಲ ಊರುಗಳನ್ನು ಪಡೆಯಿತು. ಈ ಊರುಗಳು ಎದೋಮಿನ ಸೀಮೆಯ ಹತ್ತಿರ ಇದ್ದವು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಕಬ್ಜೇಲ್, ಏದೆರ್, ಯಾಗೂರ್,


ನಂತರ ರಾಜನು ಶಿಮ್ಮಿಯನ್ನು ಕೊಲ್ಲಲು ಬೆನಾಯನಿಗೆ ಆಜ್ಞಾಪಿಸಿದನು. ಅಂತೆಯೇ, ಬೆನಾಯನು ಅವನನ್ನು ಸಂಹರಿಸಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.


ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.


ಆದರೆ ಅವನು ನನ್ನನ್ನಾಗಲಿ ಯಾಜಕನಾದ ಚಾದೋಕನನ್ನಾಗಲಿ ಯೆಹೋಯಾದಾವನ ಮಗನಾದ ಬೆನಾಯನನ್ನಾಗಲಿ ನಿನ್ನ ಮಗನಾದ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ.


ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.


ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.


ಅರಣ್ಯದಲ್ಲಿದ್ದ ಕೋಟೆಯಲ್ಲಿ ಗಾದ್ ಕುಲದ ಕೆಲವರು ದಾವೀದನನ್ನು ಸೇರಿಕೊಂಡರು. ಇವರು ಯುದ್ಧದಲ್ಲಿ ನುರಿತ ಸೈನಿಕರಾಗಿದ್ದರು. ಈಟಿ ಬರ್ಜಿಗಳಲ್ಲಿ ಪರಿಣಿತರು; ಸಿಂಹಗಳಂತೆ ಕ್ರೂರಿಗಳು; ಬೆಟ್ಟದ ಮೇಲೆ ಜಿಂಕೆಯ ತರಹ ವೇಗವಾಗಿ ಓಡಬಲ್ಲವರು.


“ಸೌಲನು ಮತ್ತು ಯೋನಾತಾನನು ಒಬ್ಬರನ್ನೊಬ್ಬರು ಪ್ರೀತಿಸಿದರು; ತಮ್ಮ ಪರಸ್ಪರ ಜೀವಿತದಲ್ಲಿ ಆನಂದಿಸಿದರು. ಸೌಲನು ಮತ್ತು ಯೋನಾತಾನನು ಮರಣದಲ್ಲೂ ಒಂದಾದರು. ಅವರು ಹದ್ದುಗಳಿಗಿಂತ ವೇಗವಾಗಿ ಹೋದರು; ಸಿಂಹಗಳಿಗಿಂತ ಶಕ್ತಿಶಾಲಿಗಳಾಗಿದ್ದರು.


ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.


ಅಬೀಷೈಯನು ಈ ಮೂವರಿಗಿಂತಲೂ ಹೆಚ್ಚು ಗೌರವಕ್ಕೆ ಪಾತ್ರನಾದನು. ಅವನು ಈ ಮೂವರಿಗೆ ನಾಯಕನಾದನು. ಆದರೆ ಅವನು ಈ ಮೂವರಲ್ಲಿ ಒಬ್ಬನಾಗಿರಲಿಲ್ಲ.


ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು.


ಯೆಹೋಯಾದಾವನ ಮಗನಾದ ಬೆನಾಯನು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದನು. ಬೆನಾಯನು ಆ ಮೂವರು ಪರಾಕ್ರಮಿಗಳಷ್ಟೇ ಪ್ರಸಿದ್ಧನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು