2 ಸಮುಯೇಲ 23:21 - ಪರಿಶುದ್ದ ಬೈಬಲ್21 ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮತ್ತೊಮ್ಮೆ ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಕೊಂದನು. ಆ ಈಜಿಪ್ಟಿನವನ ಕೈಯಲ್ಲಿ ಒಂದು ಭರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಭರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನೇ ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು. ಆ ಈಜಿಪ್ಟಿನವನ ಕೈಯಲ್ಲಿ ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |