Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:22 - ಪರಿಶುದ್ದ ಬೈಬಲ್‌

22 ಯೆಹೋಯಾದಾವನ ಮಗನಾದ ಬೆನಾಯನು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದನು. ಬೆನಾಯನು ಆ ಮೂವರು ಪರಾಕ್ರಮಿಗಳಷ್ಟೇ ಪ್ರಸಿದ್ಧನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ಪರಾಕ್ರಮ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈ ಪರಾಕ್ರಮ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:22
5 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು.


ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು.


ಬೆನಾಯನು ಮೂವತ್ತು ಮಂದಿ ಪರಾಕ್ರಮಿಗಳಿಗಿಂತ ಹೆಚ್ಚು ಗೌರವಕ್ಕೆ ಪಾತ್ರನಾದರೂ ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ತನ್ನ ಅಂಗರಕ್ಷಕ ಪಡೆಯ ನಾಯಕನನ್ನಾಗಿ ಬೆನಾಯನನ್ನು ನೇಮಿಸಿದನು.


ಆದ್ದರಿಂದ ಯೋವಾಬನು ಕೆರೇತ್ಯರ ಪೆಲೇತ್ಯರ ಮತ್ತು ಸೈನಿಕರೆಲ್ಲರ ಸಮೇತವಾಗಿ ಜೆರುಸಲೇಮಿನಿಂದ ಹೊರಟು ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು