Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:6 - ಪರಿಶುದ್ದ ಬೈಬಲ್‌

6 “ಆದರೆ ಕೆಟ್ಟಜನರೆಲ್ಲರೂ ಮುಳ್ಳುಗಳಂತಿದ್ದಾರೆ. ಜನರು ಮುಳ್ಳುಗಳನ್ನು ಹಿಡಿದುಕೊಳ್ಳುವುದಿಲ್ಲ; ಅವರು ಅವುಗಳನ್ನು ಎಸೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದುರುಳರಾದರೊ ದೂರವೆಸೆದ ಕಾಡುಮುಳ್ಳುಗಳು ಮುಟ್ಟಲಾಗದು ಅವುಗಳನು ಬರಿಗೈಯಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ; ಅವುಗಳನ್ನು ಹಿಡಿಯಬೇಕೆಂದಿರುವವನು ಕೈಯಿಂದ ಹಿಡಿಯಲಾರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:6
12 ತಿಳಿವುಗಳ ಹೋಲಿಕೆ  

“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.


ಎಲುಬುಗಳು ಬೂದಿಯಾಗುವ ತನಕ ಜನರು ಸುಡಲ್ಪಡುವರು. ಅವರು ಮುಳ್ಳುಗಳಂತೆಯೂ ಒಣಪೊದೆಗಳಂತೆಯೂ ಬೇಗನೆ ಸುಟ್ಟುಹೋಗುವರು.


ನನ್ನ ಪ್ರಿಯೆ, ಮುಳ್ಳುಗಳ ನಡುವೆ ಇರುವ ತಾವರೆ ಹೂವಿನಂತೆ ನೀನು ಯುವತಿಯರಲ್ಲೆಲ್ಲಾ ಶ್ರೇಷ್ಠಳು.


ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.


ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ನಿಮ್ಮ ಸ್ವಂತ ದೇಶದಲ್ಲಿರುವ ಕೆಲವು ಕೆಟ್ಟ ಜನರು ಕೆಟ್ಟದ್ದನ್ನು ಮಾಡಲು ತಮ್ಮ ಪಟ್ಟಣದ ಜನರನ್ನು ಒತ್ತಾಯಪಡಿಸುತ್ತಿದ್ದಾರೆಂದು ನೀವು ಕೇಳಬಹುದು. ಅವರು ತಮ್ಮ ಪಟ್ಟಣದ ಜನರಿಗೆ, ‘ನಾವು ಹೋಗಿ ಬೇರೆ ದೇವರುಗಳ ಸೇವೆಮಾಡೋಣ’ ಎಂದು ಹೇಳಬಹುದು. (ಈ ದೇವರುಗಳನ್ನು ನೀವು ಹಿಂದೆಂದೂ ತಿಳಿದಿಲ್ಲ.)


ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ


ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.


ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು