2 ಸಮುಯೇಲ 23:9 - ಪರಿಶುದ್ದ ಬೈಬಲ್9 ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿಗಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನು ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.