2 ಸಮುಯೇಲ 24:1 - ಪರಿಶುದ್ದ ಬೈಬಲ್1 ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ತಿರಿಗಿ ಇಸ್ರಾಯೇಲ್ಯರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಯೆಹೂದ್ಯ ಕುಲಗಳವರ ಖಾನೇಷುಮಾರಿಮಾಡುವದಕ್ಕೆ ಪ್ರೇರೇಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.
ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.