2 ಸಮುಯೇಲ 24:13 - ಪರಿಶುದ್ದ ಬೈಬಲ್13 ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಗಾದನು ದಾವೀದನ ಬಳಿಗೆ ಬಂದು, “ನಿಮ್ಮ ನಾಡಿನಲ್ಲಿ ಏಳು ವರ್ಷಗಳ ಬರಗಾಲ ಉಂಟಾಗಬೇಕೋ, ಇಲ್ಲವೇ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳ ತನಕ ನಿನ್ನನ್ನು ಓಡಿಸಿಬಿಡಬೇಕೋ, ಇಲ್ಲವೆ ನಿನ್ನ ನಾಡಿನಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಗಾದನು ದಾವೀದನ ಬಳಿಗೆ ಹೋಗಿ - ನಿನ್ನ ದೇಶದಲ್ಲಿ ಏಳು ವರುಷಗಳ ಬರವು ಉಂಟಾಗಬೇಕೋ, ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳುಗಳವರೆಗೆ ಓಡಿಸಿ ಬಿಡಬೇಕೋ, ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು. ಅಧ್ಯಾಯವನ್ನು ನೋಡಿ |