Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:14 - ಪರಿಶುದ್ದ ಬೈಬಲ್‌

14 ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:14
28 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ಎಷ್ಟೋ ಕರುಣೆಯುಳ್ಳವನು. ನಿನ್ನ ಚಿತ್ತಾನುಸಾರವಾಗಿ ನನ್ನನ್ನು ಉಜ್ಜೀವನಗೊಳಿಸು.


ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ಆಗ ಗಾದನಿಗೆ ದಾವೀದನು, “ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸಬಾರದು. ಯೆಹೋವನು ಕರುಣೆಯುಳ್ಳವನು. ಆದ್ದರಿಂದ ಆತನೇ ನಿರ್ಧರಿಸಲಿ.”


ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.


ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು.


ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಶಿಷ್ಟನು ತನ್ನ ಪಶುಗಳನ್ನು ನೋಡಿಕೊಳ್ಳುತ್ತಾನೆ. ಆದರೆ ದುಷ್ಟನ ವಾತ್ಸಲ್ಯವು ಕ್ರೂರವಾಗಿದೆ.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.


ಇಸ್ರೇಲರು ತಾವು ತೊಂದರೆಗೆ ಒಳಗಾಗಿರುವುದನ್ನೂ ಇಕ್ಕಟ್ಟಿನಲ್ಲಿ ಸಿಕ್ಕಿಬಿದ್ದಿರುವುದನ್ನೂ ತಿಳಿದುಕೊಂಡರು. ಅವರು ಗವಿಗಳಲ್ಲಿ ಮತ್ತು ಬಂಡೆಗಲ್ಲುಗಳ ಸಂಧಿಗಳಲ್ಲಿ ಅಡಗಿಕೊಳ್ಳಲು ಓಡಿಹೋದರು. ಅವರು ಬಂಡೆಗಳ ಮಧ್ಯದಲ್ಲಿಯೂ ಬಾವಿಗಳಲ್ಲಿಯೂ ಮತ್ತು ನೆಲದ ಕುಳಿಗಳಲ್ಲಿಯೂ ಅಡಗಿಕೊಂಡರು.


ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.


ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?’ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.


ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಮೆಫೀಬೋಶೆತನು ದಾವೀದನಿಗೆ ಮತ್ತೆ ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನಿನ್ನ ಸೇವಕನಾದ ನನಗೆ ಬಹಳ ದಯಾಪರನಾಗಿರುವೆ, ನಾನು ಸತ್ತ ನಾಯಿಗಿಂತ ಉತ್ತಮನೇನಲ್ಲ!” ಎಂದು ಹೇಳಿದನು.


ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.


ಆದರೆ ಅಂದು ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಊಹಿಸಿ ಭಯಪಟ್ಟಂತೆ ನಿನ್ನನ್ನು ಆ ಜನರ ಕೈಗೆ ಒಪ್ಪಿಸುವದಿಲ್ಲ.


ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು