Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:17 - ಪರಿಶುದ್ದ ಬೈಬಲ್‌

17 ಜನರನ್ನು ಕೊಂದ ದೂತನನ್ನು ದಾವೀದನು ನೋಡಿ ಯೆಹೋವನೊಂದಿಗೆ ಮಾತನಾಡಿದನು. ದಾವೀದನು ಯೆಹೋವನಿಗೆ, “ನಾನು ಪಾಪ ಮಾಡಿದೆನು. ನಾನು ತಪ್ಪು ಮಾಡಿದೆನು. ಆದರೆ ಈ ಜನರು ಕೇವಲ ಕುರಿಗಳಂತೆ ನಿರಪರಾಧಿಗಳು. ಅವರು ಯಾವ ತಪ್ಪನ್ನೂ ಮಾಡಲಿಲ್ಲ. ದಯಮಾಡಿ ನಿನ್ನ ದಂಡನೆಯು ನನಗೆ ಮತ್ತು ನನ್ನ ತಂದೆಯ ಕುಲದ ವಿರುದ್ಧವಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದಾವೀದನು ಜನಸಂಹಾರಕದೂತನನ್ನು ಕಂಡಾಗ ಯೆಹೋವನಿಗೆ - ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:17
23 ತಿಳಿವುಗಳ ಹೋಲಿಕೆ  

ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?


ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಈ ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು.


ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಕೊಯ್ಯಲ್ಪಡುವ ಕುರಿಗಳೋ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ.


ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನೀನು ನನ್ನನ್ನು ಗುರಿಯನ್ನಾಗಿ ಮಾಡಿಕೊಂಡದ್ದೇಕೆ? ನಾನು ನಿನಗೆ ಸಮಸ್ಯೆಯಾದೆನೇ?


ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚೆಲ್ಲಾಪಿಲ್ಲಿಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು’” ಎಂದು ಹೇಳಿದನು.


ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಈ ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.


ಅಬ್ರಹಾಮನು ಯೆಹೋವನ ಸಮೀಪಕ್ಕೆ ಬಂದು, “ಯೆಹೋವನೇ, ನೀನು ಕೆಟ್ಟವರನ್ನು ನಾಶಮಾಡುವಾಗ ನೀತಿವಂತರನ್ನು ಸಹ ನಾಶಮಾಡಬೇಕೆಂದಿರುವೆಯೋ?


“ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು.


ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು.


ಫರೋಹನು ಕೂಡಲೇ ಮೋಶೆ ಆರೋನರನ್ನು ಕರೆಸಿ, “ನಾನು ನಿಮ್ಮ ದೇವರಾದ ಯೆಹೋವನಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ.


ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.


ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.


ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು