2 ಸಮುಯೇಲ 24:21 - ಪರಿಶುದ್ದ ಬೈಬಲ್21 ಅರೌನನು, “ರಾಜನಾದ ನನ್ನ ಒಡೆಯನೇ, ನನ್ನ ಬಳಿ ಬಂದದ್ದೇಕೆ?” ಎಂದು ಕೇಳಿದನು. ದಾವೀದನು, “ನಿನ್ನಿಂದ ಕಣವನ್ನು ಕೊಂಡುಕೊಳ್ಳುವುದಕ್ಕಾಗಿ ಬಂದೆನು. ನಾನು ಯೆಹೋವನಿಗೆ ಒಂದು ಯಜ್ಞವೇದಿಕೆಯನ್ನು ನಿರ್ಮಿಸುತ್ತೇನೆ. ಆಗ ರೋಗರುಜಿನಗಳು ನಿಲ್ಲುತ್ತವೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನನ್ನ ಒಡೆಯರಾದ ಅರಸರು ತಮ್ಮ ಸೇವಕನ ಬಳಿಗೆ ಬರುವುದಕ್ಕೇನು ಕಾರಣ?” ಎಂದು ಕೇಳಿದನು. ದಾವೀದನು, “ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಪೀಠವನ್ನು ಕಟ್ಟುವುದಕ್ಕೆ ಬಂದಿದ್ದೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವದಕ್ಕೇನು ಕಾರಣ ಎಂದು ಕೇಳಿದನು. ದಾವೀದನು ಅವನಿಗೆ - ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟುವದಕ್ಕೆ ಬಂದಿದ್ದೇನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |