2 ಸಮುಯೇಲ 24:22 - ಪರಿಶುದ್ದ ಬೈಬಲ್22 ಅರೌನನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ಯಜ್ಞವನ್ನು ಸಮರ್ಪಿಸಲು ನೀನು ಏನನ್ನು ಬೇಕಾದರೂ ತೆಗೆದುಕೊ. ಸರ್ವಾಂಗಹೋಮವನ್ನು ಅರ್ಪಿಸಲು ಇಲ್ಲಿ ಕೆಲವು ಹೋರಿಗಳಿವೆ, ನೊಗ ಮುಂತಾದ ಮರದ ಸಲಕರಣೆಗಳಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಅರೌನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದುದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಬಲಿದಾನಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಅರೌನನು ದಾವೀದನಿಗೆ - ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಯಜ್ಞಕ್ಕೆ ಹೋರಿಗಳೂ ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು. ಅಧ್ಯಾಯವನ್ನು ನೋಡಿ |
ಬೇತ್‌ಷೆಮೆಷಿನ ಯೆಹೋಶುವನಿಗೆ ಸೇರಿದ ಹೊಲಕ್ಕೆ ಆ ಬಂಡಿಯು ಬಂದಿತು. ಆ ಹೊಲದ ಒಂದು ದೊಡ್ಡ ಕಲ್ಲಿನ ಬಳಿ ಆ ಬಂಡಿಯು ನಿಂತಿತು. ಬೇತ್‌ಷೆಮೆಷಿನ ಜನರು ಬಂಡಿಯ ಕಟ್ಟಿಗೆಗಳನ್ನು ಒಡೆದು ಆ ಹಸುಗಳನ್ನು ಯೆಹೋವನಿಗೆ ಆಹುತಿಯಾಗಿ ಅರ್ಪಿಸಿದರು. ಕೆಲವು ಲೇವಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಅಲ್ಲದೆ ಅವರು ಚಿನ್ನದ ಮಾದರಿಗಳಿದ್ದ ಚೀಲವನ್ನು ಇಳಿಸಿದರು. ಲೇವಿಯರು ಯೆಹೋವನ ಪೆಟ್ಟಿಗೆಯನ್ನು ಮತ್ತು ಆ ಚೀಲವನ್ನು ದೊಡ್ಡಕಲ್ಲಿನ ಮೇಲಿಟ್ಟರು. ಅದೇ ದಿನ ಬೇತ್‌ಷೆಮೆಷಿನ ಜನರು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದರು.