2 ಸಮುಯೇಲ 24:24 - ಪರಿಶುದ್ದ ಬೈಬಲ್24 ಆದರೆ ರಾಜನು ಅರೌನನಿಗೆ, “ಇಲ್ಲ, ನಾನು ನಿನಗೆ ಸತ್ಯವನ್ನು ಹೇಳುತ್ತಿದ್ದೇನೆ. ನಾನು ನಿನ್ನ ಭೂಮಿಗೆ ಬೆಲೆಯನ್ನು ಕೊಟ್ಟು ಕೊಂಡುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ನಾನು ನನ್ನ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು. ಆದ್ದರಿಂದ ದಾವೀದನು ಕಣವನ್ನು ಮತ್ತು ಹೋರಿಗಳನ್ನು ಐವತ್ತು ಶೆಕೆಲ್‌ಗಳಿಗೆ ಕೊಂಡುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅರಸರು ಅರೌನನಿಗೆ, “ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಸರ್ವೇಶ್ವರನಿಗೆ ಸುಮ್ಮನೆ ಸಿಕ್ಕಿದ್ದನ್ನು ಬಲಿದಾನವಾಗಿ ಅರ್ಪಿಸಲೊಲ್ಲೆನು,” ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ಬೆಳ್ಳಿ ನಾಣ್ಯಕ್ಕೆ ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅರಸನು ಅರೌನನಿಗೆ - ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಸುಮ್ಮನೆ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ರೂಪಾಯಿಗೆ ಕೊಂಡುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು. ಅಧ್ಯಾಯವನ್ನು ನೋಡಿ |