Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:3 - ಪರಿಶುದ್ದ ಬೈಬಲ್‌

3 ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಈ ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಈ ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೋವಾಬನು ಅರಸನಿಗೆ - ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಗಳನ್ನು ಈಗ ಇರುವದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:3
7 ತಿಳಿವುಗಳ ಹೋಲಿಕೆ  

ನಮ್ಮ ಪೂರ್ವಿಕರ ದೇವರಾದ ಯೆಹೋವನು ಈಗ ಇರುವುದಕ್ಕಿಂತ ಸಾವಿರಪಟ್ಟು ಅಧಿಕವಾಗಿ ನಿಮ್ಮ ಜನಸಂಖ್ಯೆಯನ್ನು ಹೆಚ್ಚಿಸಲಿ. ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮನ್ನು ಆಶೀರ್ವದಿಸಲಿ.


ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ.


“ಆಗ ನೀನು ನಿನ್ನ ಜನರನ್ನು ನೋಡುವೆ. ನಿನ್ನ ಮುಖವು ಸಂತೋಷದಿಂದ ಪ್ರಕಾಶಿಸುವದು. ಮೊದಲು ನೀನು ಭಯಪಡುವೆ. ಆ ಬಳಿಕ ನೀನು ಉತ್ಸಾಹಪಡುವೆ. ಸಮುದ್ರದಾಚೆ ಇರುವ ಐಶ್ವರ್ಯವು ನಿನ್ನ ಮುಂದೆ ರಾಶಿ ಹಾಕಲ್ಪಡುವದು. ಜನಾಂಗಗಳ ನಿಕ್ಷೇಪವು ನಿನಗೆ ದೊರೆಯುವುದು.


ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ.


ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು.


ಆದರೆ ರಾಜನಾದ ದಾವೀದನು ಯೋವಾಬನಿಗೆ ಮತ್ತು ಸೈನ್ಯದ ಸೇನಾಪತಿಗಳಿಗೆ ಜನರನ್ನು ಲೆಕ್ಕಹಾಕಲು ಆಜ್ಞಾಪಿಸಿದನು. ಆದ್ದರಿಂದ ಯೋವಾಬನು ಸೈನ್ಯದ ಸೇನಾಪತಿಗಳೊಡನೆ ಇಸ್ರೇಲಿನ ಜನರನ್ನು ಲೆಕ್ಕಹಾಕಲು ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು