2 ಸಮುಯೇಲ 3:12 - ಪರಿಶುದ್ದ ಬೈಬಲ್12 ಅಬ್ನೇರನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ಈ ದೇಶವನ್ನು ಯಾರು ಆಳಬೇಕೆಂಬದು ನಿನ್ನ ಅಭಿಪ್ರಾಯ? ನನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡರೆ, ಇಸ್ರೇಲಿನ ಜನರೆಲ್ಲರನ್ನು ನೀನು ಆಳುವಂತೆ ಮಾಡಲು ನಾನು ಸಹಾಯ ಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ, “ಈ ನಾಡು ಯಾರದು? ನೀನು ನನ್ನೊಡನೆ ಒಪ್ಪಂದ ಮಾಡಿಕೊಂಡರೆ ಇಸ್ರಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವೆನು. ಹಾಗು ನನ್ನ ಬೆಂಬಲ ನಿನಗಿರುವುದು,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಹಾಗೆ ನನ್ನ ಹಸ್ತವು ನಿನ್ನ ಸಂಗಡ ಇರುವದು ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು. ಅಧ್ಯಾಯವನ್ನು ನೋಡಿ |
ನಿನ್ನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸುವೆ; ನಿನ್ನನ್ನು ಪ್ರೀತಿಸುವ ಜನರನ್ನು ನೀನು ದ್ವೇಷಿಸುವೆ. ಆದ್ದರಿಂದ ನಿನ್ನ ಸೇವಕರು ಅವಮಾನಿತರಾಗಿದ್ದಾರೆ. ನಿನ್ನ ಅಧಿಕಾರಿಗಳು ಮತ್ತು ನಿನ್ನ ಜನರು ನಿನಗೆ ಮುಖ್ಯವಲ್ಲ ಎಂಬುದನ್ನು ನೀನಿಂದು ರುಜುವಾತುಪಡಿಸಿದೆ. ಇಂದು ಅಬ್ಷಾಲೋಮನು ಬದುಕಿದ್ದು, ನಾವೆಲ್ಲರೂ ಸತ್ತಿದ್ದರೆ, ನೀನು ಬಹಳ ಹರ್ಷಗೊಳುತ್ತಿದ್ದೆ ಎಂಬುದನ್ನು ನಾನು ಈ ದಿನ ಕಂಡುಕೊಂಡೆನು.