Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:13 - ಪರಿಶುದ್ದ ಬೈಬಲ್‌

13 ಅದಕ್ಕೆ ದಾವೀದನು, “ಒಳ್ಳೆಯದು! ನಾನು ನಿನ್ನೊಡನೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆದರೆ ನೀನು ನನಗಾಗಿ ಒಂದು ಕೆಲಸ ಮಾಡಬೇಕು. ಸೌಲನ ಮಗಳಾದ ಮೀಕಲಳನ್ನು ನನ್ನ ಬಳಿಗೆ ಕರೆತರುವ ತನಕ ನಾನು ನಿನ್ನನ್ನು ಸಂಧಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಪ್ಪಂದಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಕಾರ್ಯವನ್ನು ಮಾಡಬೇಕು; ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ ನೀನು ನನ್ನ ಮುಖವನ್ನು ನೋಡಕೂಡದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ದಾವೀದನು - ಒಳ್ಳೇದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಮಾಡಬೇಕು. ನನ್ನನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರಕೊಂಡು ಬರಬೇಕು; ಹಾಗೆ ಕರಕೊಂಡು ಬಾರದಿದ್ದರೆ ನೀನು ನನ್ನ ಮೋರೆಯನ್ನು ನೋಡಕೂಡದು ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:13
8 ತಿಳಿವುಗಳ ಹೋಲಿಕೆ  

ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.


ದಾವೀದನ ನಗರದಲ್ಲಿ ಮೆರವಣಿಗೆಯು ಬಂದಾಗ ದಾವೀದನ ಹೆಂಡತಿಯಾದ ಮೀಕಲಳು ಕಿಟಿಕಿಯಿಂದ ನೋಡಿದಳು. (ಇವಳು ಸೌಲನ ಮಗಳು.) ದಾವೀದನು ಕುಣಿಯುತ್ತಾ ಹಾಡುವದನ್ನು ಆಕೆ ಕಂಡಳು. ತನ್ನ ಗಂಡನ ಮೇಲೆ ಆಕೆಗಿದ್ದ ಗೌರವವು ಕಡಿಮೆಯಾಯಿತು. ಯಾಕೆಂದರೆ ದಾವೀದನು ಒಬ್ಬ ಸಾಮಾನ್ಯ ವ್ಯಕ್ತಿಯಂತೆ ಬುದ್ಧಿ ಇಲ್ಲದ ಕೆಲಸ ಮಾಡುತ್ತಿರುವನೆಂದು ಆಕೆಯು ಅಂದುಕೊಂಡಳು.


ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು.


ಆದರೆ ನೀವು ನಮಗೆ, ‘ನೀವು ಆ ಕಿರಿಯ ಸಹೋದರನನ್ನು ಕರೆದುಕೊಂಡು ಬರಲೇಬೇಕು; ಇಲ್ಲವಾದರೆ, ನಾನು ನಿಮಗೆ ದವಸಧಾನ್ಯಗಳನ್ನು ಮತ್ತೆ ಮಾರುವುದಿಲ್ಲ’ ಎಂದು ಹೇಳಿದಿರಿ.


ಅಬ್ನೇರನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ಈ ದೇಶವನ್ನು ಯಾರು ಆಳಬೇಕೆಂಬದು ನಿನ್ನ ಅಭಿಪ್ರಾಯ? ನನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡರೆ, ಇಸ್ರೇಲಿನ ಜನರೆಲ್ಲರನ್ನು ನೀನು ಆಳುವಂತೆ ಮಾಡಲು ನಾನು ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು