Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:16 - ಪರಿಶುದ್ದ ಬೈಬಲ್‌

16 ಮೀಕಲಳ ಗಂಡನಾದ ಪಲ್ಟೀಯೇಲನೂ ಅವಳ ಜೊತೆಗೆ ಬಂದನು. ಮೀಕಲಳ ಜೊತೆಯಲ್ಲಿ ಬಹುರೀಮಿಗೆ ಬರುವಾಗ ಪಲ್ಟೀಯೇಲನು ಆಳುತ್ತಿದ್ದನು. ಆದರೆ ಅಬ್ನೇರನು, “ನಿನ್ನ ಮನೆಗೆ ಹಿಂದಿರುಗಿ ಹೋಗು” ಎಂದು ಪಲ್ಟೀಯೇಲನಿಗೆ ಹೇಳಿದನು. ಆದ್ದರಿಂದ ಪಲ್ಟೀಯೇಲನು ಮನೆಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗಿ ಮನೆಗೆ ಹೋಗು” ಎಂದು ಹೇಳಲು ಅವನು ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಪಲ್ಟೀಯೇಲನು ಅಳುತ್ತಾ ಬಹುರೀಮಿನವರೆಗೆ ಆಕೆಯ ಹಿಂದೆ ಬಂದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗು, ನಡೆ,” ಎಂದು ಹೇಳಲು ಅವನು ಹಿಂದಿರುಗಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಪಲ್ಟೀಯೇಲನು ಬಹುರೀವಿುನವರೆಗೆ ಅಳುತ್ತಾ ಆಕೆಯ ಹಿಂದೆ ಬಂದನು. ಅನಂತರ ಅಬ್ನೇರನು ಅವನಿಗೆ - ಹಿಂದಿರುಗು, ನಡೆ ಎಂದು ಹೇಳಲು ಅವನು ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವಳ ಗಂಡನು ಅವಳ ಸಂಗಡ ಬಹುರೀಮಿನವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆ, “ತಿರುಗಿ ಹೋಗು ಹಿಂದಿರುಗು,” ಎಂದನು. ಅವನು ತಿರುಗಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:16
9 ತಿಳಿವುಗಳ ಹೋಲಿಕೆ  

ಗೇರನ ಮಗನಾದ ಶಿಮ್ಮಿಯು ಬೆನ್ಯಾಮೀನ್ ಕುಲದವನು. ಅವನು ಬಹುರೀಮಿನಲ್ಲಿ ನೆಲೆಸಿದ್ದನು. ರಾಜನಾದ ದಾವೀದನನ್ನು ಭೇಟಿ ಮಾಡಲು ಶಿಮ್ಮಿಯು ತ್ವರಿತವಾಗಿ ಯೆಹೂದದ ಜನರೊಂದಿಗೆ ಬಂದನು.


ದಾವೀದನು ಬಹುರೀಮಿಗೆ ಬಂದನು. ಸೌಲನ ಕುಟುಂಬಕ್ಕೆ ಸೇರಿದ ಗೇರನ ಮಗನಾದ ಶಿಮ್ಮಿಯು ದಾವೀದನನ್ನು ಶಪಿಸುತ್ತಾ ಬಹುರೀಮಿನಿಂದ ಹೊರಗೆ ಬಂದನು.


“ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು.


ಆದರೆ ಯೋನಾತಾನ್ ಮತ್ತು ಅಹೀಮಾಚರನ್ನು ಒಬ್ಬ ಬಾಲಕನು ನೋಡಿದನು. ಆ ಬಾಲಕನು ಅಬ್ಷಾಲೋಮನಿಗೆ ತಿಳಿಸಲು ಓಡಿದನು. ಯೋನಾತಾನನು ಮತ್ತು ಅಹೀಮಾಚನು ಬೇಗನೆ ಓಡಿಹೋಗಿ ಬಹುರೀಮಿನಲ್ಲಿ ಒಬ್ಬನ ಮನೆಯೊಳಗೆ ಹೋದರು. ಅವನ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಯೋನಾತಾನನು ಮತ್ತು ಅಹೀಮಾಚನು ಈ ಬಾವಿಯೊಳಗೆ ಇಳಿದರು.


ಆಗ ಈಷ್ಬೋಶೆತನು, ಲಯಿಷನ ಮಗನಾದ ಪಲ್ಟೀಯೇಲನ ಬಳಿಯಿಂದ ಮೀಕಲಳನ್ನು ಕರೆತರುವಂತೆ ತನ್ನ ಜನರಿಗೆ ಹೇಳಿದನು.


ಅರಾಬಾದ ಅಬೀಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,


ಇಷ್ಮಾಯೇಲನು ಈ ಎಂಭತ್ತು ಜನರನ್ನು ಕಾಣುವದಕ್ಕಾಗಿ ಮಿಚ್ಫ ಪಟ್ಟಣದ ಹೊರಗಡೆ ಹೋದನು. ಅವರನ್ನು ಕಾಣುವದಕ್ಕೆ ಹೋಗುವಾಗ ಅವನು ಅಳುತ್ತಿದ್ದನು. ಇಷ್ಮಾಯೇಲನು ಆ ಎಂಭತ್ತು ಜನರನ್ನು ಎದುರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನನ್ನು ಭೇಟಿ ಮಾಡುವದಕ್ಕೆ ನನ್ನೊಂದಿಗೆ ಬನ್ನಿ” ಎಂದು ಕರೆದನು.


ಬೆನ್ಯಾಮೀನ್ ಕುಲದ ಒಂದು ಸಾವಿರ ಜನರು ಸಹ ಶಿಮ್ಮಿಯೊಂದಿಗೆ ಬಂದರು. ಸೌಲನ ಕುಲದಲ್ಲಿ ಸೇವಕನಾಗಿದ್ದ ಚೀಬನು ಸಹ ಬಂದನು. ಚೀಬನು ತನ್ನ ಹದಿನೈದು ಜನ ಮಕ್ಕಳನ್ನು ಮತ್ತು ಇಪ್ಪತ್ತು ಜನ ಸೇವಕರನ್ನು ತನ್ನೊಂದಿಗೆ ಕರೆತಂದನು. ಇವರೆಲ್ಲರೂ ರಾಜನಾದ ದಾವೀದನನ್ನು ಸಂಧಿಸಲು ಜೋರ್ಡನ್ ನದಿಯ ಹತ್ತಿರಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು