2 ಸಮುಯೇಲ 3:18 - ಪರಿಶುದ್ದ ಬೈಬಲ್18 ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ’” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ದಾವೀದನ ವಿಷಯವಾಗಿ, “ನನ್ನ ದಾಸ ದಾವೀದನ ಮುಖಾಂತರ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸುವೆನು,” ಎಂದು ನುಡಿದಿದ್ದಾರಲ್ಲವೇ? ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನು ದಾವೀದನ ವಿಷಯವಾಗಿ - ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವೆನೆಂದು ನುಡಿದಿದ್ದಾನಲ್ಲಾ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಈಗ ಅದನ್ನು ಮಾಡಿರಿ. ಏಕೆಂದರೆ, ‘ನಾನು ನನ್ನ ದಾಸನಾದ ದಾವೀದನ ಕೈಯಿಂದ ಜನರಾದ ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ, ಅವರ ಸಮಸ್ತ ಶತ್ರುಗಳ ಕೈಯಿಂದಲೂ ತಪ್ಪಿಸಿ ರಕ್ಷಿಸುವೆನು,’ ಎಂದು ಯೆಹೋವ ದೇವರು ದಾವೀದನ ವಿಷಯದಲ್ಲಿ ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.