Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:21 - ಪರಿಶುದ್ದ ಬೈಬಲ್‌

21 ಅಬ್ನೇರನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ನಾನು ಹೋಗಿ ಎಲ್ಲಾ ಇಸ್ರೇಲರನ್ನೂ ನಿನ್ನ ಬಳಿಗೆ ಕರೆತರುತ್ತೇನೆ; ನಂತರ ಅವರು ನಿನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಳ್ಳುತ್ತಾರೆ. ನೀನು ನಿನ್ನ ಇಷ್ಟದಂತೆ ಸಮಸ್ತ ಇಸ್ರೇಲನ್ನು ಆಳಬಹುದು” ಎಂದು ಹೇಳಿದನು. ದಾವೀದನು ಅಬ್ನೇರನನ್ನು ಕಳುಹಿಸಿದನು. ಅಬ್ನೇರನು ಸಮಾಧಾನದಿಂದ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಯೇಲರನ್ನೆಲ್ಲಾ ಕೂಡಿಸಿ ನನ್ನ ಒಡೆಯರಾದ ಅರಸರ ಬಳಿಗೆ ಕರೆದುಕೊಂಡು ಬರುವೆನು; ಅವರು ನಿಮ್ಮ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನ ಮಾಡಬಹುದು,” ಎಂದು ಹೇಳಿದನು. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಬ್ನೇರನು ದಾವೀದನಿಗೆ - ನಾನು ಹೊರಟುಹೋಗಿ ಇಸ್ರಾಯೇಲ್ಯರನ್ನೆಲ್ಲಾ ಕೂಡಿಸಿ ನನ್ನ ಒಡೆಯನಾದ ಅರಸನ ಬಳಿಗೆ ಕರಕೊಂಡುಬರುವೆನು; ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು; ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು ಎಂದು ಹೇಳಲು ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:21
8 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಇಡೀ ಇಸ್ರೇಲಿಗೆ ರಾಜನನ್ನಾಗಿ ಮಾಡುತ್ತೇನೆ. ನೀನು ನಿನ್ನ ಇಷ್ಟಾನುಸಾರವಾಗಿ ಪ್ರತಿಯೊಂದರ ಮೇಲೆ ದೊರೆತನ ಮಾಡುವಂತೆ ಮಾಡುತ್ತೇನೆ.


ಅಬ್ನೇರನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ಈ ದೇಶವನ್ನು ಯಾರು ಆಳಬೇಕೆಂಬದು ನಿನ್ನ ಅಭಿಪ್ರಾಯ? ನನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡರೆ, ಇಸ್ರೇಲಿನ ಜನರೆಲ್ಲರನ್ನು ನೀನು ಆಳುವಂತೆ ಮಾಡಲು ನಾನು ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ.


ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.


ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.


ನಂತರ ಅಬ್ನೇರನು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದನು. ಅಬ್ನೇರನು ಇಪ್ಪತ್ತು ಜನರನ್ನು ತನ್ನ ಸಂಗಡ ಕರೆದು ತಂದನು. ಅಬ್ನೇರನಿಗೂ ಅವನ ಸಂಗಡಿಗರಿಗೂ ದಾವೀದನು ಔತಣಕೂಟವನ್ನು ಏರ್ಪಡಿಸಿದ್ದನು.


ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು