Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:24 - ಪರಿಶುದ್ದ ಬೈಬಲ್‌

24 ಯೋವಾಬನು ರಾಜನ ಬಳಿಗೆ ಬಂದು, “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದರೂ ಅವನನ್ನು ದಂಡಿಸದೆ ಯಾಕೆ ಕಳುಹಿಸಿಬಿಟ್ಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅರಸನ ಬಳಿಗೆ ಹೋಗಿ, “ನೀವು ಮಾಡಿದ್ದೇನು? ಅಬ್ನೇರನು ನಿಮ್ಮ ಬಳಿಗೆ ಬಂದಿದ್ದನಂತೆ; ನೀವು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಸನ ಬಳಿಗೆ ಹೋಗಿ - ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ; ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೋವಾಬನು ಅರಸನ ಬಳಿಗೆ ಬಂದು, “ಏನು ಮಾಡಿದೆ? ಅಬ್ನೇರನು ನಿನ್ನ ಬಳಿಗೆ ಬಂದನು. ಅವನು ಹೋಗಿ ಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:24
8 ತಿಳಿವುಗಳ ಹೋಲಿಕೆ  

ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು.


ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.


ಈಷ್ಬೋಶೆತನ ಮಾತುಗಳಿಂದ ಅಬ್ನೇರನು ಬಹಳ ಕೋಪಗೊಂಡನು. ಅಬ್ನೇರನು, “ನಾನು ಸೌಲನಿಗೂ ಅವನ ವಂಶದವರಿಗೂ ನಂಬಿಗಸ್ತನಾಗಿದ್ದೆನು. ನಾನು ನಿನ್ನನ್ನು ದಾವೀದನಿಗೆ ಒಪ್ಪಿಸಲಿಲ್ಲ ಹಾಗೂ ಅವನಿಂದ ನೀನು ಸೋಲುವಂತೆ ಮಾಡಲಿಲ್ಲ. ನಾನು ಯೆಹೂದಕ್ಕಾಗಿ ಕೆಲಸ ಮಾಡುವ ದ್ರೋಹಿಯಲ್ಲ. ಆದರೆ ಈಗ ನಾನು ಇಂತಹ ಕೆಟ್ಟ ಕೆಲಸವನ್ನು ಮಾಡಿದೆನೆಂದು ಹೇಳುತ್ತಿರುವೆ.


ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು! ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟೆ” ಎಂದು ಹೇಳಿದನು.


ಯೋವಾಬನು ತನ್ನ ಎಲ್ಲಾ ಸೈನ್ಯದೊಂದಿಗೆ ಹೆಬ್ರೋನಿಗೆ ಬಂದನು. ಸೈನಿಕರು ಯೋವಾಬನಿಗೆ, “ನೇರನ ಮಗನಾದ ಅಬ್ನೇರನು ರಾಜನಾದ ದಾವೀದನ ಹತ್ತಿರಕ್ಕೆ ಬಂದಿದ್ದನು. ದಾವೀದನು ಅಬ್ನೇರನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು” ಎಂದು ಹೇಳಿದರು.


ಅಬ್ನೇರನು ನೇರನ ಮಗನೆಂಬುದು ನಿನಗೆ ತಿಳಿದಿದೆ. ಅವನು ನಿನ್ನನ್ನು ವಂಚಿಸಲು ಬಂದಿದ್ದನು. ನೀನು ಮಾಡುತ್ತಿರುವುದನ್ನೆಲ್ಲಾ ತಿಳಿದುಕೊಳ್ಳಲು ಅವನು ಬಂದಿದ್ದನು” ಎಂದು ಹೇಳಿದನು.


ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ತುಂಬ ಕೆಟ್ಟದ್ದನ್ನು ಮಾಡಿರುವೆ; ಸಾರಯಳು ನಿನಗೆ ಹೆಂಡತಿಯಾಗಬೇಕೆಂದು ಯಾಕೆ ತಿಳಿಸಲಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು