2 ಸಮುಯೇಲ 3:25 - ಪರಿಶುದ್ದ ಬೈಬಲ್25 ಅಬ್ನೇರನು ನೇರನ ಮಗನೆಂಬುದು ನಿನಗೆ ತಿಳಿದಿದೆ. ಅವನು ನಿನ್ನನ್ನು ವಂಚಿಸಲು ಬಂದಿದ್ದನು. ನೀನು ಮಾಡುತ್ತಿರುವುದನ್ನೆಲ್ಲಾ ತಿಳಿದುಕೊಳ್ಳಲು ಅವನು ಬಂದಿದ್ದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನೇರನ ಮಗನಾದ ಅಬ್ನೇರನ ಸಂಗತಿ ನಿಮಗೆ ಗೊತ್ತಿಲ್ಲವೇ? ಅವನು ನಿಮ್ಮನ್ನು ವಂಚಿಸುವುದಕ್ಕೂ ನಿಮ್ಮ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀವು ಏನು ಮಾಡುತ್ತೀರೆಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೇರನ ಮಗನಾದ ಅಬ್ನೇರನ ಸಂಗತಿಯು ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳುಕೊಳ್ಳುವದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬದನ್ನು ಕಂಡು ಹಿಡಿಯುವದಕ್ಕೂ ಬಂದಿದ್ದನಷ್ಟೆ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು. ಅಧ್ಯಾಯವನ್ನು ನೋಡಿ |
ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.
ಆದರೆ ಅಮ್ಮೋನಿಯರ ನಾಯಕರು ತಮ್ಮ ಪ್ರಭುವಾದ ಹಾನೂನನಿಗೆ, “ನಿನ್ನನ್ನು ಸಂತೈಸಲು ಕೆಲವು ಜನರನ್ನು ಕಳುಹಿಸುವುದರ ಮೂಲಕ ದಾವೀದನು ನಿನ್ನ ತಂದೆಯನ್ನು ಗೌರವಿಸಲು ಪ್ರಯತ್ನಿಸುತ್ತಿರುವನೆಂದು ನೀನು ಭಾವಿಸಿರುತ್ತಿಯಲ್ಲವೇ? ಇಲ್ಲ! ನಿನ್ನ ನಗರದ ಸಂಗತಿಗಳನ್ನು ರಹಸ್ಯವಾಗಿ ಕಂಡುಕೊಳ್ಳಲು ಮತ್ತು ತಿಳಿದುಕೊಳ್ಳಲು ದಾವೀದನು ಈ ಜನರನ್ನು ಕಳುಹಿಸಿದ್ದಾನೆ. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡಲು ಯೋಜನೆ ಮಾಡುತ್ತಿದ್ದಾರೆ” ಎಂದು ಹೇಳಿದರು.