27 ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.
27 ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.
27 ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.
27 ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.
27 ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.
“ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.
ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.
ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.
ಅಬ್ಷಾಲೋಮನು, “ನೀನು ಬರಲು ಇಚ್ಛಿಸದಿದ್ದರೆ, ದಯವಿಟ್ಟು ನನ್ನ ಸೋದರನಾದ ಅಮ್ನೋನನನ್ನು ಕಳುಹಿಸು” ಎಂದು ಕೇಳಿದನು. ರಾಜನಾದ ದಾವೀದನು ಅಬ್ಷಾಲೋಮನಿಗೆ, “ನಿನ್ನ ಜೊತೆಯಲ್ಲಿ ಅವನೇಕೆ ಬರಬೇಕು?” ಎಂದನು.
ಅಲ್ಲದೆ ಅಮಾಸನಿಗೆ, ‘ನೀನು ನನ್ನ ಕುಟುಂಬದ ಒಂದು ಭಾಗವಾಗಿರುವೆ. ನಾನು ನಿನ್ನನ್ನು ಯೋವಾಬನ ಸ್ಥಾನದಲ್ಲಿ ಸೇನಾಪತಿಯನ್ನಾಗಿ ಮಾಡದೆ ಹೋದರೆ, ದೇವರು ನನ್ನನ್ನು ದಂಡಿಸಲಿ’ ಎಂದು ಹೇಳಿ” ಎಂದನು.