Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:3 - ಪರಿಶುದ್ದ ಬೈಬಲ್‌

3 ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:3
22 ತಿಳಿವುಗಳ ಹೋಲಿಕೆ  

ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು.


ದಾವೀದನ ಕೆಲವು ಗಂಡುಮಕ್ಕಳು ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನ ಗಂಡುಮಕ್ಕಳು ಯಾರೆಂದರೆ: ಅಮ್ನೋನನು ದಾವೀದನ ಚೊಚ್ಚಲಮಗನು. ಅವನ ತಾಯಿ ಅಹೀನೋವಮಳು. ಈಕೆಯು ಇಜ್ರೇಲಿನವಳು. ಎರಡನೆಯ ಮಗನು ಕರ್ಮೇಲ್ಯಳಾದ ಅಬೀಗೈಲಳ ಮಗನಾದ ದಾನಿಯೇಲನು.


ಆದ್ದರಿಂದ ದಾವೀದನು ಅಲ್ಲಿಗೆ ಹೋದನು. ಅವನ ಇಬ್ಬರು ಹೆಂಡತಿಯರೂ ಅವನ ಜೊತೆಯಲ್ಲಿ ಹೋದರು. ಅವರು ಯಾರೆಂದರೆ: ಇಜ್ರೇಲಿನ ಅಹೀನೋವಮಳು ಮತ್ತು ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳು.


ಅಬೀಗೈಲಳು ಬೇಗನೆ ಒಂದು ಕತ್ತೆಯ ಮೇಲೇರಿ, ದಾವೀದನ ಸಂದೇಶಕರೊಂದಿಗೆ ಹೊರಟುಹೋದಳು. ಅಬೀಗೈಲಳು ಐದು ಜನ ಸೇವಕಿಯರನ್ನು ತನ್ನೊಂದಿಗೆ ಕರೆದುಕೊಂಡು ಹೋದಳು. ಅವಳು ದಾವೀದನ ಹೆಂಡತಿಯಾದಳು.


ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.


ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ.


ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)


ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.


ಆದರೆ ರಾಜನಾದ ದಾವೀದನು, “ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿ ಹೋಗಲಿ. ಅವನು ನನ್ನನ್ನು ನೋಡಲು ಬರುವುದು ಬೇಡ” ಎಂದನು. ಆದ್ದರಿಂದ ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದನು. ಅಬ್ಷಾಲೋಮನು ರಾಜನನ್ನು ನೋಡಲು ಹೋಗಲಿಲ್ಲ.


ದಾವೀದನಿಗೆ ಅಬ್ಷಾಲೋಮನೆಂಬ ಮಗನಿದ್ದನು. ಅವನಿಗೆ ತಾಮಾರಳೆಂಬ ತಂಗಿಯಿದ್ದಳು. ಆಕೆ ಬಹಳ ಸುಂದರಿಯಾಗಿದ್ದಳು. ದಾವೀದನ ಮತ್ತೊಬ್ಬ ಮಗನಾದ ಅಮ್ನೋನನು,


ಅಬ್ಷಾಲೋಮನು ಯೋವಾಬನಿಗೆ, “ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳುಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!” ಎಂದನು.


ನಾಲ್ಕು ವರ್ಷಗಳ ಬಳಿಕ ಅಬ್ಷಾಲೋಮನು ರಾಜನಾದ ದಾವೀದನಿಗೆ, “ನಾನು ಹೆಬ್ರೋನಿನಲ್ಲಿ ಯೆಹೋವನೊಂದಿಗೆ ಮಾಡಿದ ವಿಶೇಷ ಪ್ರಮಾಣವನ್ನು ಪೂರ್ಣಗೊಳಿಸುವುದಕ್ಕೆ ದಯವಿಟ್ಟು ಅನುಮತಿಕೊಡು.


ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು’” ಎಂದನು.


ರಾಜನಾದ ದಾವೀದನು ತನ್ನ ಮಗನಾದ ಅದೋನೀಯನನ್ನು ಎಂದೂ ತಿದ್ದಲಿಲ್ಲ. ದಾವೀದನು, “ನೀನು ಹೀಗೇಕೆ ಮಾಡುತ್ತಿರುವೆ?” ಎಂದು ಅವನನ್ನು ಒಂದು ಸಾರಿಯಾದರೂ ಕೇಳಲಿಲ್ಲ. ಅದೋನೀಯನು ಅಬ್ಷಾಲೋಮನ ಬಳಿಕ ಹುಟ್ಟಿದ ಮಗ. ಅದೋನೀಯನು ಬಹಳ ಸುಂದರನಾಗಿದ್ದನು.


ಅದೋನೀಯನು, “ಒಂದು ಕಾಲದಲ್ಲಿ ರಾಜ್ಯಾಧಿಕಾರವು ನನ್ನದಾಗಿತ್ತೆಂಬುದು ನಿನ್ನ ನೆನಪಿನಲ್ಲಿದೆ. ಇಸ್ರೇಲಿನ ಜನರೆಲ್ಲರೂ ನಾನೇ ಅವರ ರಾಜನೆಂದು ತಿಳಿದಿದ್ದರು. ಆದರೆ ಸಂಗತಿಗಳು ಬದಲಾದವು. ಈಗ ನನ್ನ ಸೋದರನೇ ರಾಜನು. ಯೆಹೋವನು ಅವನನ್ನು ರಾಜನನ್ನಾಗಿ ಆರಿಸಿದನು.


ಅಬ್ಷಾಲೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು. ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು.


ನಂತರ ಯೋವಾಬನು ಮೇಲೆದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರುಸಲೇಮಿಗೆ ಕರೆದುತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು