Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:35 - ಪರಿಶುದ್ದ ಬೈಬಲ್‌

35 ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲಿ ಇತರ ಆಹಾರವನ್ನಾಗಲಿ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಳುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವ ಆಹಾರವನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ,” ಎಂದು ಆಣೆಯಿಟ್ಟು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು - ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ ಎಂದು ಆಣೆಯಿಟ್ಟು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇನ್ನೂ ಹೊತ್ತಿರುವಾಗಲೇ ಜನರೆಲ್ಲರು ಬಂದು ಊಟಮಾಡು ಎಂದು ದಾವೀದನಿಗೆ ಹೇಳಿದರು. ಅದಕ್ಕೆ ದಾವೀದನು, “ಸೂರ್ಯನು ಅಸ್ತಮಿಸುವುದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾಗಲಿ, ಬೇರೆ ಯಾವ ಆಹಾರವನ್ನಾಗಲಿ ರುಚಿ ನೋಡಿದರೆ, ದೇವರು ನನಗೆ ಬೇಕಾದದ್ದನ್ನು ಮಾಡಲಿ, ಅಧಿಕವಾಗಿಯೂ ಮಾಡಲಿ,” ಎಂದು ಆಣೆ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:35
13 ತಿಳಿವುಗಳ ಹೋಲಿಕೆ  

ದಾವೀದನ ಕುಟುಂಬದ ನಾಯಕರು ಬಂದು ಅವನನ್ನು ನೆಲದಿಂದ ಮೇಲಕ್ಕೆತ್ತಲು ಪ್ರಯತ್ನಿಸಿದರು. ಆದರೆ ದಾವೀದನು ಮೇಲೇಳಲಿಲ್ಲ. ಅವನು ಈ ನಾಯಕರೊಂದಿಗೆ ಊಟ ಮಾಡಲಿಲ್ಲ.


ಅವರು ಬಹಳ ದುಃಖದಿಂದ ಅತ್ತರು. ಅವರು ಸಂಜೆಯ ತನಕ ಏನನ್ನೂ ತಿನ್ನಲಿಲ್ಲ. ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಜನರೂ ಸತ್ತದ್ದಕ್ಕಾಗಿ ಮತ್ತು ಇಸ್ರೇಲಿಗಾಗಿ ದಾವೀದನು ಮತ್ತು ಅವನ ಜನರು ಅತ್ತರು. ಸೌಲನನ್ನೂ ಅವನ ಮಗನಾದ ಯೋನಾತಾನನನ್ನೂ ಮತ್ತು ಅನೇಕ ಮಂದಿ ಇಸ್ರೇಲರನ್ನೂ ಖಡ್ಗಗಳಿಂದ ಇರಿದು ಕೊಂದದ್ದಕ್ಕಾಗಿ ಅವರು ಅತ್ತರು.


ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನ್ನು ತರುವದಿಲ್ಲ. ತಾಯಿಯನ್ನಾಗಲಿ ತಂದೆಯನ್ನಾಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನ್ನು ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನ್ನು ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನ್ನು ನೀಡುವದಿಲ್ಲ.


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಬೇಕು. ಈ ಪ್ರತಿಜ್ಞೆಯನ್ನು ನಾನು ಪೂರ್ಣಗೊಳಿಸದಿದ್ದರೆ ನನ್ನನ್ನು ಶಿಕ್ಷಿಸು ಎಂದು ನಾನು ಯೆಹೋವನಲ್ಲಿ ಕೇಳಿಕೊಳ್ಳುತ್ತೇನೆ. ಮರಣವು ಮಾತ್ರ ನಮ್ಮಿಬ್ಬರನ್ನು ಅಗಲಿಸಬಲ್ಲದು” ಎಂದು ದೃಢವಾಗಿ ಹೇಳಿದಳು.


ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”


ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ನಾನು ನನ್ನ ಸತ್ತ ಹೆಂಡತಿಗೆ ಮಾಡಿದಂತೆಯೇ ನೀವೂ ಮಾಡುವಿರಿ. ನಿಮ್ಮ ದುಃಖವನ್ನು ತೋರಿಸಲು ನೀವು ನಿಮ್ಮ ಮೀಸೆಯನ್ನು ಮುಚ್ಚಿಕೊಳ್ಳುವುದಿಲ್ಲ. ಯಾರಾದರೂ ಸತ್ತಾಗ, ಗೋಳಾಡುವವರು ತಿನ್ನುವ ಆಹಾರವನ್ನು ನೀವು ತಿನ್ನುವುದಿಲ್ಲ.


ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.


ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನಿನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು.


ಅಬ್ನೇರನೇ, ನಿನ್ನ ಕೈಗಳನ್ನು ಹಗ್ಗದಿಂದ ಬಿಗಿದಿರಲಿಲ್ಲ. ನಿನ್ನ ಪಾದಗಳಿಗೆ ಸಂಕೋಲೆಯನ್ನು ತೊಡಿಸಿರಲಿಲ್ಲ. ದುಷ್ಟಜನರೆದುರು ನೀನು ಬಿದ್ದೆಯಲ್ಲ, ನೀನು ಬಿದ್ದು ಸತ್ತೆಯಲ್ಲ.” ಆಗ ಜನರೆಲ್ಲರೂ ಅಬ್ನೇರನಿಗಾಗಿ ಮತ್ತೆ ಗೋಳಾಡಿದರು.


ಇದನ್ನು ಕೇಳಿದ ಜನರೆಲ್ಲರೂ ರಾಜನಾದ ದಾವೀದನ ಈ ಕಾರ್ಯವನ್ನು ಮೆಚ್ಚಿಕೊಂಡರು.


ಆಗ ಯಾಬೇಷ್ ಗಿಲ್ಯಾದಿನ ರಣವೀರರು ಹೊರಟು ಸೌಲನ ಮತ್ತು ಅವನ ಗಂಡುಮಕ್ಕಳ ಶವಗಳನ್ನು ಯಾಬೇಷ್ ಗಿಲ್ಯಾದಿಗೆ ತಂದರು. ಆ ರಣವೀರರು ಸೌಲನ ಮತ್ತು ಅವನ ಗಂಡುಮಕ್ಕಳ ಎಲುಬುಗಳನ್ನು ಯಾಬೇಷಿನಲ್ಲಿದ್ದ ಒಂದು ದೊಡ್ಡ ಮರದ ಬುಡದಲ್ಲಿ ಹೂಳಿಟ್ಟರು. ಅನಂತರ ಏಳು ದಿವಸಗಳ ತನಕ ಅವರು ಶೋಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು