2 ಸಮುಯೇಲ 3:39 - ಪರಿಶುದ್ದ ಬೈಬಲ್39 ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು. ಅಧ್ಯಾಯವನ್ನು ನೋಡಿ |
ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.
ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.