Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:7 - ಪರಿಶುದ್ದ ಬೈಬಲ್‌

7 ಸೌಲನಿಗೆ ರಿಚ್ಪಳೆಂಬ ಹೆಸರಿನ ದಾಸಿಯಿದ್ದಳು. ಅವಳು ಅವನಿಗೆ ಹೆಂಡತಿಯಂತೆ ಇದ್ದಳು. ರಿಚ್ಪಳು ಅಯಾಹನ ಮಗಳು. ಈಷ್ಬೋಶೆತನು ಅಬ್ನೇರನಿಗೆ, “ನನ್ನ ತಂದೆಯ ಸೇವಕಿಯೊಡನೆ ಲೈಂಗಿಕ ಸಂಬಂಧವನ್ನು ಏಕೆ ಮಾಡುತ್ತಿರುವೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯನ್ನು ಕೂಡಿದ್ದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿವಸ ಈಷ್ಬೋಶೆತನು ಅಬ್ನೇರನನ್ನು - ನೀನು ನನ್ನ ತಂದೆಯ ಉಪಪತ್ನಿಯನ್ನು ಕೂಡಿದ್ದೇಕೆ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:7
6 ತಿಳಿವುಗಳ ಹೋಲಿಕೆ  

ಅದೋನೀಯನು, “ರಾಜನಾದ ಸೊಲೊಮೋನನು ನೀನು ಏನನ್ನು ಕೇಳಿದರೂ ಮಾಡುತ್ತಾನೆಂಬುದು ನನಗೆ ತಿಳಿದಿದೆ. ಆದ್ದರಿಂದ, ಶೂನೇಮಿನ ಅಬೀಷಗ್ ಎಂಬ ಸ್ತ್ರೀಯನ್ನು ನನಗೆ ಕೊಡುವಂತೆ ದಯಮಾಡಿ ನೀನು ಅವನನ್ನು ಕೇಳು. ನಾನು ಅವಳನ್ನು ಮದುವೆಯಾಗುತ್ತೇನೆ” ಎಂದು ಹೇಳಿದನು.


ಅವನ ಕುಟುಂಬವನ್ನೂ ಅವನ ಪತ್ನಿಯರನ್ನೂ ನಿನಗೆ ಕೊಟ್ಟವನು ನಾನೇ. ನಿನ್ನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಮಾಡಿದವನು ನಾನೇ. ಅದು ಸಾಲದು ಎನ್ನುವಂತೆ, ನಾನು ಮತ್ತಷ್ಟು ಹೆಚ್ಚಿನದನ್ನೂ ನೀಡಿದೆನು.


ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು