Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:11 - ಪರಿಶುದ್ದ ಬೈಬಲ್‌

11 ದುಷ್ಟರಾದ ನೀವು ಇಂದು ಒಬ್ಬ ನೀತಿವಂತನನ್ನು ಅವನ ಸ್ವಂತ ಮನೆಯಲ್ಲಿ ಅವನ ಸ್ವಂತ ಹಾಸಿಗೆಯ ಮೇಲೆಯೇ ಕೊಂದಿರುವುದರಿಂದ ನಿಮ್ಮನ್ನೂ ನಾನು ಕೊಂದು ನಿರ್ಮೂಲ ಮಾಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿತೀರಿಸುವದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇ ಬಿಡುವೆನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗಾದರೆ, ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನಿರ್ದೋಷಿಯನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲ್ಲಿಸುವೆನು. ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾರಣೆ ಮಾಡಿ, ನಿಮ್ಮನ್ನು ಭೂಮಿಯಿಂದ ತೆಗೆದುಬಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:11
19 ತಿಳಿವುಗಳ ಹೋಲಿಕೆ  

ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.


ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.


ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”


ದುಷ್ಟನು ಒಳ್ಳೆಯವನಿಗೆ ಆಪತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸು ಮಾಡಿದಂತೆಯೂ ಇದೆ.


ದುಷ್ಟರಾದರೋ ಸ್ವದೇಶದಿಂದ ತೆಗೆದುಹಾಕಲ್ಪಡುವರು; ದ್ರೋಹಿಗಳು ನಿರ್ಮೂಲವಾಗುವರು.


ಆ ಪಾಪಗಳನ್ನು ಯೆಹೋವನು ಯಾವಾಗಲೂ ಜ್ಞಾಪಕಮಾಡಿಕೊಳ್ಳಲಿ; ಭೂಮಿಯ ಮೇಲೆ ಅವರ ನೆನಪೇ ಉಳಿಯದಂತೆ ಯೆಹೋವನು ಮಾಡಲಿ.


ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.


ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


“ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನೂ ಕೊಲ್ಲಲ್ಪಡಬೇಕು.


ನಾನು ನನ್ನ ಶಕ್ತಿಯಿಂದ ನಿನಗೂ ನಿನ್ನ ಜನರಿಗೂ ವ್ಯಾಧಿಯನ್ನು ಬರಮಾಡಿ ನಿಮ್ಮನ್ನು ನಿರ್ಮೂಲ ಮಾಡಬಹುದಿತ್ತು.


ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.


ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.


ನೀನು ನಿನ್ನ ತಮ್ಮನನ್ನು ಕೊಂದುಹಾಕಿದೆ. ನಿನ್ನ ಕೈಗಳಿಂದ ಸುರಿಸಿದ ಅವನ ರಕ್ತವನ್ನು ಕುಡಿಯಲು ಭೂಮಿಯು ಬಾಯಿ ತೆರೆಯಿತು. ಆದ್ದರಿಂದ ಈಗ ಅದು ಶಾಪಗ್ರಸ್ತವಾಗಿದೆ.


ಯೆಹೋವನು ನಿನ್ನನ್ನು ದಂಡಿಸುತ್ತಿದ್ದಾನೆ. ಏಕೆಂದರೆ ನೀನು ಸೌಲನ ಕುಟುಂಬದವರನ್ನು ಕೊಂದು ಸೌಲನ ರಾಜಪದವಿಯನ್ನು ಕದ್ದಿರುವೆ. ಈಗ ನಿನಗೂ ಅದೇ ಸಂಭವಿಸುತ್ತಿದೆ. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಮಗನಿಗೆ ಕೊಟ್ಟಿದ್ದಾನೆ. ಏಕೆಂದರೆ ನೀನೊಬ್ಬ ಕೊಲೆಗಾರ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು