2 ಸಮುಯೇಲ 4:12 - ಪರಿಶುದ್ದ ಬೈಬಲ್12 ದಾವೀದನು, ರೇಕಾಬನನ್ನು ಮತ್ತು ಬಾಣನನ್ನು ಕೊಲ್ಲಲು ಯುವಕರಿಗೆ ಆಜ್ಞಾಪಿಸಿದನು. ಆಗ ಆ ಯುವಕರು ರೇಕಾಬನ ಮತ್ತು ಬಾಣನ ಕೈಕಾಲುಗಳನ್ನು ಕತ್ತರಿಸಿಹಾಕಿ, ಹೆಬ್ರೋನಿನ ಕೊಳದ ಬಳಿಯಲ್ಲಿ ಅವರ ದೇಹಗಳನ್ನು ನೇತುಹಾಕಿದರು. ನಂತರ ಅವರು ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು ಹೋಗಿ, ಹೆಬ್ರೋನಿನಲ್ಲಿ ಅಬ್ನೇರನನ್ನು ಸಮಾಧಿಮಾಡಿದ ಸ್ಥಳದಲ್ಲೇ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಂತೆಯೇ ತನ್ನ ಆಳುಗಳಿಗೆ ಆಜ್ಞಾಪಿಸಿದನು. ಅವರು ಇವರನ್ನು ಕೊಂದು ಕೈಕಾಲುಗಳನ್ನು ಕತ್ತರಿಸಿ ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಇಬ್ನೇರನ ಸಮಾಧಿಯಲ್ಲಿ ಹೂಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು ಕೈಕಾಲುಗಳನ್ನು ಕತ್ತರಿಸಿ ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಇಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದಾವೀದನು ತನ್ನ ಜನರಿಗೆ ಆಜ್ಞಾಪಿಸಿದ್ದರಿಂದ, ಅವರು ಅವರನ್ನು ಕೊಂದುಹಾಕಿ, ಅವರ ಕೈಕಾಲುಗಳನ್ನು ಕಡಿದು, ಹೆಬ್ರೋನಿನ ಕೊಳದ ಬಳಿಯಲ್ಲಿ ತೂಗುಹಾಕಿದರು. ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು, ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು. ಅಧ್ಯಾಯವನ್ನು ನೋಡಿ |