Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:2 - ಪರಿಶುದ್ದ ಬೈಬಲ್‌

2 ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸೌಲನ ಮಗನಿಗೆ ಬಾಣ ಹಾಗು ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಇವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಈ ಬೇರೋತ್ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸೌಲನ ಮಗನಿಗೆ ಬಾಣ, ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಬೇರೋತ್ ಎಂಬದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಸೌಲನ ಮಗನಿಗೆ ಸೇನಾಪತಿಗಳು ಇಬ್ಬರಿದ್ದರು. ಒಬ್ಬನ ಹೆಸರು ಬಾಣನು. ಮತ್ತೊಬ್ಬನ ಹೆಸರು ರೇಕಾಬನು. ಇವರು ಬೆನ್ಯಾಮೀನ್ ಗೋತ್ರದಲ್ಲಿ ಬೇರೋತ್ ಗ್ರಾಮದವನಾದ ರಿಮ್ಮೋನನ ಮಕ್ಕಳು. ಏಕೆಂದರೆ ಬೇರೋತ್ ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:2
9 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಗೋತ್ರದವರು ಹದಿನಾಲ್ಕು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್,


ಆದ್ದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು.


ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಅರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ತಮ್ಮ ಒಡೆಯನ ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಅರಾಮ್ಯರು ಕಳುಹಿಸಲಿಲ್ಲ.


ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಈ ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು.


ಯೋವಾಬನೂ ದಾವೀದನ ಅಧಿಕಾರಿಗಳೂ ಯುದ್ಧರಂಗದಿಂದ ಹಿಂದಿರುಗಿದರು. ಶತ್ರುಗಳಿಂದ ವಶಪಡಿಸಿಕೊಂಡ ಅನೇಕ ಬೆಲೆಬಾಳುವ ವಸ್ತುಗಳು ಅವರ ಹತ್ತಿರವಿದ್ದವು. ದಾವೀದನು ಅಬ್ನೇರನನ್ನು ಆಗಲೇ ಸಮಾಧಾನದಿಂದ ಕಳುಹಿಸಿಕೊಟ್ಟಿದ್ದರಿಂದ ಯೋವಾಬನು ಬಂದಾಗ ಅವನು ಹೆಬ್ರೋನಿನಲ್ಲಿರಲಿಲ್ಲ.


ಬೇರೋತಿನ ರಿಮ್ಮೋನನ ಮಕ್ಕಳಾದ ಬಾಣನು ಮತ್ತು ರೇಕಾಬನು ಈಷ್ಬೋಶೆತನ ಮನೆಗೆ ಮಧ್ಯಾಹ್ನದಲ್ಲಿ ಹೋದರು. ಈಷ್ಬೋಶೆತನು ಬಿಸಿಲಿನ ತಾಪದಿಂದ ವಿಶ್ರಾಂತಿ ಪಡೆಯುತ್ತಿದ್ದನು.


ದಾವೀದನು ರಿಮ್ಮೋನನ ಮಕ್ಕಳಾದ ರೇಕಾಬನಿಗೂ ಅವನ ಸೋದರನಾದ ಬಾಣನಿಗೂ, “ಯೆಹೋವನಾಣೆಯಾಗಿಯೂ ಆತನು ಎಲ್ಲಾ ಕೇಡುಗಳಿಂದ ನನ್ನನ್ನು ರಕ್ಷಿಸಿದನು.


ಅಮ್ಮೋನಿಯನಾದ ಚೆಲೆಕ್, ಚೆರೂಯಳ ಮಗನಾದ ಯೋವಾಬನ ಸಹಾಯಕನೂ ಬೇರೋತ್ಯನೂ ಆದ ನಹರೈ,


ಮಿಚ್ಪೆ, ಕೆಫೀರಾ, ಮೋಚಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು