Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:5 - ಪರಿಶುದ್ದ ಬೈಬಲ್‌

5 ಬೇರೋತಿನ ರಿಮ್ಮೋನನ ಮಕ್ಕಳಾದ ಬಾಣನು ಮತ್ತು ರೇಕಾಬನು ಈಷ್ಬೋಶೆತನ ಮನೆಗೆ ಮಧ್ಯಾಹ್ನದಲ್ಲಿ ಹೋದರು. ಈಷ್ಬೋಶೆತನು ಬಿಸಿಲಿನ ತಾಪದಿಂದ ವಿಶ್ರಾಂತಿ ಪಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್ ಹಾಗು ಬಾಣ ಎಂಬವರು ಅವನ ಮನೆಯ ಬಳಿಗೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬವರು ಅವನ ಮನೆಯ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬನೂ, ಬಾಣನೂ ಹೊರಟು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಈಷ್ಬೋಶೆತನ ಮನೆಗೆ ಬಂದರು. ಅವನು ಮಂಚದ ಮೇಲೆ ಮಲಗಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:5
9 ತಿಳಿವುಗಳ ಹೋಲಿಕೆ  

ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.


ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.


ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.


ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.


ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.


ಅಮೋನನ ಸೇವಕರು ಸಂಚುಮಾಡಿ ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.


ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು