6-7 ಬಾಣನು ಮತ್ತು ರೇಕಾಬನು ಗೋಧಿಯನ್ನು ತೆಗೆದುಕೊಳ್ಳುವವರಂತೆ ಮನೆಯ ಮಧ್ಯಭಾಗಕ್ಕೆ ಬಂದರು. ಈಷ್ಬೋಶೆತನು ಮಲಗುವ ಕೋಣೆಯಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ರೇಕಾಬನು ಮತ್ತು ಬಾಣನು ಈಷ್ಬೋಶೆತನನ್ನು ಇರಿದು ಕೊಂದರು. ನಂತರ ಅವರು ಅವನ ತಲೆಯನ್ನು ಕತ್ತರಿಸಿ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ಅವರು ಜೋರ್ಡನ್ ಕಣಿವೆಯಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ
ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದ್ದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು. ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು.
ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.
ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.
ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು.