Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:8 - ಪರಿಶುದ್ದ ಬೈಬಲ್‌

8 ಹೆಬ್ರೋನಿಗೆ ಬಂದು ಈಷ್ಬೋಶೆತನ ತಲೆಯನ್ನು ದಾವೀದನಿಗೆ ಕೊಟ್ಟರು. ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಅದ ಈಷ್ಬೋಶೆತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು, ಆ ತಲೆಯನ್ನು ಅವನಿಗೆ ತೋರಿಸಿ, “ಇಗೋ ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ. ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿ ತೀರಿಸಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿದರು; “ಇಗೋ, ನಿಮ್ಮ ಜೀವತೆಗೆಯಬೇಕೆಂದಿದ್ದ ನಿಮ್ಮ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ; ಅರಸರಾದ ನಮ್ಮ ಒಡೆಯರಿಗಾಗಿ ಸರ್ವೇಶ್ವರಸ್ವಾಮಿ ಸೌಲನಿಗೂ ಅವನ ಸಂತಾನಕ್ಕೂ ಈ ಹೊತ್ತು ಸೇಡುತೀರಿಸಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿ - ಇಗೋ, ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ! ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿತೀರಿಸಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನಂತರ ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋಶೆತನ ತಲೆಯನ್ನು ತಂದು ಅರಸನಿಗೆ, “ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಯೆಹೋವ ದೇವರು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲನಿಗೂ, ಅವನ ಸಂತಾನಕ್ಕೂ ಮುಯ್ಯಿ ತೀರಿಸಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:8
18 ತಿಳಿವುಗಳ ಹೋಲಿಕೆ  

ನಿನ್ನನ್ನು ಕೊಲ್ಲಲು ಒಬ್ಬ ವ್ಯಕ್ತಿಯು ಅಟ್ಟಿಸಿಕೊಂಡು ಬಂದರೆ, ನಿನ್ನ ದೇವರಾದ ಯೆಹೋವನು ನಿನ್ನ ಜೀವವನ್ನು ರಕ್ಷಿಸುತ್ತಾನೆ! ಆದರೆ ಯೆಹೋವನು ನಿನ್ನ ಶತ್ರುಗಳನ್ನು ಕವಣೆಯ ಕಲ್ಲನ್ನು ಎಸೆಯುವಂತೆ ಎಸೆದುಬಿಡುತ್ತಾನೆ!


ನನ್ನ ಶತ್ರುಗಳನ್ನು ನನಗಾಗಿ ದಂಡಿಸುವ ದೇವರು ಆತನೇ. ಆತನು ಜನರನ್ನು ನನ್ನ ಅಧೀನತೆಗೆ ಒಳಪಡಿಸುವನು.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.


ದೇವದೂತನು ಅವನಿಗೆ, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಇಸ್ರೇಲಿಗೆ ಹೋಗು. ಮಗುವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದವರು ಸತ್ತುಹೋದರು” ಎಂದು ಹೇಳಿದನು.


ನನ್ನ ನಾಲಿಗೆಯು ನಿನ್ನ ಒಳ್ಳೆಯತನದ ಬಗ್ಗೆ ಹಾಡುತ್ತಲೇ ಇರುವುದು. ನನ್ನನ್ನು ಕೊಲ್ಲಬೇಕೆಂದಿರುವವರು ಸೋತುಹೋಗಿ ಅವಮಾನಕ್ಕೀಡಾಗುವರು.


ಇಥಿಯೋಪ್ಯದವನು ಬಂದನು. ಅವನು, “ನನ್ನ ರಾಜನಾದ ಪ್ರಭುವಿಗೆ ಸುದ್ದಿಯಿದೆ, ನಿನ್ನ ವಿರುದ್ಧವಾಗಿದ್ದ ಜನರನ್ನು ಇಂದು ಯೆಹೋವನು ದಂಡಿಸಿದನು!” ಎಂದು ಹೇಳಿದನು.


ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಈಗ ಓಡುತ್ತಾಹೋಗಿ ರಾಜನಾದ ದಾವೀದನಿಗೆ ಈ ವರ್ತಮಾನವನ್ನು ತಿಳಿಸುತ್ತೇನೆ. ಯೆಹೋವನು ನಿನ್ನ ಶತ್ರುವನ್ನು ನಾಶಮಾಡಿದನೆಂದು ನಾನು ಅವನಿಗೆ ಹೇಳುತ್ತೇನೆ” ಎಂದನು.


ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.


ದಾವೀದನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು. ಸೌಲನು ತನ್ನನ್ನು ಕೊಲ್ಲಲು ಬರುತ್ತಾನೆಂದು ದಾವೀದನು ಹೆದರಿದ್ದನು.


ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು.


ಸಂದೇಶಕರು ಹೋಗಿ ಸೌಲನಿಗೆ ವಿಷಯ ತಿಳಿಸಿದಾಗ ಅವನು ದಾವೀದನನ್ನು ನೋಡಲು ಮತ್ತೆ ಸಂದೇಶಕರನ್ನು ಕಳುಹಿಸಿದನು. ಸೌಲನು ಅವರಿಗೆ, “ದಾವೀದನನ್ನು ನನ್ನ ಬಳಿಗೆ ಕರೆತನ್ನಿ! ಹಾಸಿಗೆಯ ಮೇಲೆ ಮಲಗಿರುವ ಅವನನ್ನು ಹಾಸಿಗೆಯ ಸಮೇತವಾಗಿ ತೆಗೆದುಕೊಂಡು ಬನ್ನಿ! ನಾನು ಅವನನ್ನು ಕೊಲ್ಲುತ್ತೇನೆ” ಎಂದು ಹೇಳಿದನು.


ಸೌಲನ ಕೈಯಲ್ಲಿ ಒಂದು ಈಟಿಯಿತ್ತು. “ಗೋಡೆಗೆ ಹತ್ತಿಕೊಳ್ಳುವಂತೆ ನಾನು ದಾವೀದನನ್ನು ತಿವಿಯುವೆ” ಎಂದು ಅವನು ಯೋಚಿಸಿ ಎರಡು ಬಾರಿ ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಲವೂ ತಪ್ಪಿಸಿಕೊಂಡನು.


ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.


ಸೌಲನು ತನ್ನ ಮಗನಾದ ಯೋನಾತಾನನಿಗೂ ತನ್ನ ಅಧಿಕಾರಿಗಳಿಗೂ ದಾವೀದನನ್ನು ಕೊಂದು ಹಾಕಲು ತಿಳಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳ ಇಷ್ಟಪಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು