2 ಸಮುಯೇಲ 5:11 - ಪರಿಶುದ್ದ ಬೈಬಲ್11 ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿ |
ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.