2 ಸಮುಯೇಲ 5:17 - ಪರಿಶುದ್ದ ಬೈಬಲ್17 ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಈ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲರು ದಾವೀದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಸ್ರಯೇಲರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಆಗ ಅವರು ಅವನನ್ನು ಬಂಧಿಸಲು ಬಂದರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ಯರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿ |