Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:18 - ಪರಿಶುದ್ದ ಬೈಬಲ್‌

18 ಫಿಲಿಷ್ಟಿಯರು ಬಂದು ರೆಫಾಯೀಮ್ ಕಣಿವೆಯಲ್ಲಿ ಪಾಳೆಯವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಫಿಲಿಷ್ಟಿಯರು ನಾಡಿನೊಳಗೆ ನುಗ್ಗಿ ರೆಫಾಯಿಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡಿದ್ದಾರೆಂದು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:18
8 ತಿಳಿವುಗಳ ಹೋಲಿಕೆ  

ಆ ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಆ ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.


ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ ಮೂವರು ದಾವೀದನ ಬಳಿಗೆ ಬಂದರು. ಈ ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು.


ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.


ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.


“ಆ ಸಮಯದಲ್ಲಿ ರೆಫಾಯೀಮ್ ಕಣಿವೆಯಲ್ಲಿ ಧಾನ್ಯದ ಸುಗ್ಗಿಯಂತಿರುವದು. ಕೆಲಸಗಾರರು ಹೊಲಗಳಲ್ಲಿ ಬೆಳೆಯನ್ನು ಕೊಯ್ದು ಧಾನ್ಯವನ್ನು ಶೇಖರಿಸುವರು.


ಅಲ್ಲಿಂದ ಆ ಮೇರೆಯು ರೆಫಾಯಿಮ್ ತಗ್ಗಿನ ಉತ್ತರದಲ್ಲಿರುವ ಬೆನ್‌ಹಿನ್ನೋಮ್ ತಗ್ಗಿನ ಹತ್ತಿರ ಆ ಬೆಟ್ಟದ ಬುಡಕ್ಕೆ ಇಳಿಯುತ್ತದೆ. ಆ ಮೇರೆಯು ಹಿನ್ನೋಮ್ ತಗ್ಗಿನಿಂದ ಯೆಬೂಸಿಯ ಪಟ್ಟಣದ ದಕ್ಷಿಣದವರೆಗೆ ಮುಂದುವರೆಯುತ್ತದೆ. ಅಲ್ಲಿಂದ ಅದು ಏನ್‌ರೋಗೆಲಿಗೆ ಬರುತ್ತದೆ.


ಒಂದು ಸಲ ದಾವೀದನು ಅದುಲ್ಲಾಮ್ ಗವಿಯೊಳಗಿದ್ದಾಗ, ರೆಫಾಯಿಮ್ ತಗ್ಗಿನಲ್ಲಿ ಫಿಲಿಷ್ಟಿಯರು ಪಾಳೆಯಮಾಡಿದ್ದರು. ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಈ ಮೂರು ಮಂದಿ ಗುಹೆಯಲ್ಲಿದ್ದ ದಾವೀದನೊಂದಿಗೆ ಸೇರಿಕೊಳ್ಳಲು ಹೊಟ್ಟೆಯ ಮೇಲೆ ತೆವಳಿಕೊಂಡೇ ಅವನ ಬಳಿಗೆ ಬಂದರು.


ಫಿಲಿಷ್ಟಿಯರು ಮತ್ತೆ ರೆಫಾಯೀಮ್ ಕಣಿವೆಗೆ ಬಂದು ಪಾಳೆಯವನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು