Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:19 - ಪರಿಶುದ್ದ ಬೈಬಲ್‌

19 ದಾವೀದನು ಯೆಹೋವನಿಗೆ, “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದಾವೀದನು ಯೆಹೋವನನ್ನು - ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿ ಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:19
12 ತಿಳಿವುಗಳ ಹೋಲಿಕೆ  

ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.


ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.


ದಾವೀದನು, “ನಾನು ಹೋಗಿ ಈ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು.


ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.


ಆದ್ದರಿಂದ, ನೀವು ಹೀಗೆ ಹೇಳಬೇಕು, “ಪ್ರಭುವು ಇಚ್ಛೆಪಟ್ಟರೆ, ನಾವು ಜೀವಿಸಿರುತ್ತೇವೆ. ಇಂಥಿಂಥದ್ದನ್ನು ಮಾಡುತ್ತೇವೆ.”


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಈ ಸಮಯದಲ್ಲಿ ಯೆಹೋವನು ದಾವೀದನಿಗೆ, “ಅಲ್ಲಿಗೆ ಹೋಗಬೇಡ. ಅವರ ಸೈನ್ಯವನ್ನು ಸುತ್ತಿಕೊಂಡು ಹಿಂದಿನಿಂದ ಅವರನ್ನು ಸಮೀಪಿಸು. ಬಾಲ್ಯಾಮ್ ಮರಗಳಿರುವ ಮತ್ತೊಂದು ಕಡೆಯಿಂದ ಅವರ ಮೇಲೆ ಆಕ್ರಮಣ ಮಾಡು.


ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲಿ ನನ್ನ ಬಂಧುಗಳ ಮೇಲಾಗಲಿ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು