2 ಸಮುಯೇಲ 5:20 - ಪರಿಶುದ್ದ ಬೈಬಲ್20 ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದ್ದರಿಂದ ಅವನು ಆ ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ “ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದುದರಿಂದ ಅವನು ಹೋಗಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ಸರ್ವೇಶ್ವರ ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ ಆ ಯುದ್ಧಸ್ಥಳಕ್ಕೆ, ‘ಬಾಳ್ ಪೆರಾಚೀಮ್’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಹೋಗಿ ಅವರನ್ನು ಸೋಲಿಸಿ ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆಂದು ಹೇಳಿ ಆ ಯುದ್ಧಸ್ಥಳಕ್ಕೆ ಬಾಳ್‍ಪೆರಾಚೀಮೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದಕಾರಣ ದಾವೀದನು ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ಯೆಹೋವ ದೇವರು ನನ್ನ ಶತ್ರುಗಳನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ, ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |