Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:21 - ಪರಿಶುದ್ದ ಬೈಬಲ್‌

21 ಫಿಲಿಷ್ಟಿಯರು ತಮ್ಮ ದೇವರ ವಿಗ್ರಹಗಳನ್ನು ಬಾಳ್‌ಪೆರಾಚೀಮ್‌ನಲ್ಲಿಯೇ ಬಿಟ್ಟುಹೋದರು. ದಾವೀದನು ಮತ್ತು ಅವನ ಜನರು ಈ ವಿಗ್ರಹಗಳನ್ನು ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟು ಹೋದುದರಿಂದ ದಾವೀದನೂ, ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:21
9 ತಿಳಿವುಗಳ ಹೋಲಿಕೆ  

“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸ್ವಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.


ಅಶ್ಶೂರದ ಅರಸರು ಆ ಜನಾಂಗಗಳ ದೇವರುಗಳನ್ನು ಸುಟ್ಟುಹಾಕಿದರು. ಆದರೆ ಆ ದೇವರುಗಳು ಸತ್ಯವಾದುವುಗಳಲ್ಲ. ಅವುಗಳು ಮನುಷ್ಯರು ಕಲ್ಲಿನಿಂದ ಮತ್ತು ಮರದಿಂದ ಕೆತ್ತಿದ ವಿಗ್ರಹಗಳಾಗಿದ್ದವು. ಆದ್ದರಿಂದ ಅಶ್ಶೂರದ ಅರಸರು ಅವುಗಳನ್ನು ನಾಶಮಾಡಲು ಸಾಧ್ಯವಾಯಿತು.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


“ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.


ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ಆ ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು