Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:25 - ಪರಿಶುದ್ದ ಬೈಬಲ್‌

25 ಯೆಹೋವನು ಆಜ್ಞಾಪಿಸಿದಂತೆಯೇ ದಾವೀದನು ಮಾಡಿದನು. ಅವನು ಫಿಲಿಷ್ಟಿಯರನ್ನು ಸೋಲಿಸಿ ಗೆಬದಿಂದ ಗೆಜೆರಿನವರೆಗೆ ಅವರನ್ನು ಅಟ್ಟಿಸಿಕೊಂಡು ಹೋಗಿ ದಾರಿಯುದ್ದಕ್ಕೂ ಅವರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದಾವೀದನು ಸರ್ವೇಶ್ವರನ ಆಜ್ಞಾನುಸಾರ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜರಿನವರೆಗೂ ಹೊಡೆದು ಓಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ದಾವೀದನು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗೆಬದಿಂದ ಗೆಜೆರಿನವರೆಗೆ ಫಿಲಿಷ್ಟಿಯರನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:25
9 ತಿಳಿವುಗಳ ಹೋಲಿಕೆ  

ಯೆಹೋವನು ಹೇಳಿದಂತೆಯೇ ದಾವೀದನು ಮಾಡಿದನು. ದಾವೀದನೂ ಅವನ ಸೈನಿಕರೂ ಫಿಲಿಷ್ಟಿಯರನ್ನು ಸೋಲಿಸಿ ಗಿಬ್ಯೋನಿನಿಂದ ಹಿಡಿದು ಗೆಜೆರ್ ಪಟ್ಟಣದವರೆಗೂ ಅವರನ್ನು ಕೊಲ್ಲುತ್ತಾ ಹೋದರು.


ಪೆರಾಚೀಮ್ ಬೆಟ್ಟದ ಮೇಲೆ ಯೆಹೋವನು ಯುದ್ಧ ಮಾಡಿದಂತೆಯೇ ಆತನು ಯುದ್ಧಮಾಡುವನು. ಗಿಬ್ಯೋನ್ ಕಣಿವೆಯಲ್ಲಿ ಯೆಹೋವನು ಕೋಪಗೊಂಡಿದ್ದಂತೆಯೇ ಕೋಪಗೊಳ್ಳುವನು. ಆಗ ಆತನು ಮಾಡಬೇಕಾದ ಕಾರ್ಯಗಳನ್ನು ಮಾಡುವನು. ಯೆಹೋವನು ಕೆಲವು ಅಪರಿಚಿತವಾದ ಸಂಗತಿಗಳನ್ನು ಮಾಡುವನು. ಆದರೆ ಆತನು ತನ್ನ ಕಾರ್ಯವನ್ನು ಮಾಡಿಮುಗಿಸುವನು. ಆ ಕೆಲಸವು ಒಬ್ಬ ಪರಿಚಯವಿಲ್ಲದವನ ಕೆಲಸವಾಗಿದೆ.


ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.


ಎಗ್ಲೋನಿನ ಅರಸ ಗೆಜೆರಿನ ಅರಸ


ಎಫ್ರಾಯೀಮ್ ಪ್ರದೇಶದ ಬೆಟ್ಟದಲ್ಲಿರುವ ಆಶ್ರಯನಗರವಾದ ಶೆಕೆಮ್, ಗೆಜೆರ್,


ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.


ಇದೇ ಸಮಯದಲ್ಲಿ ಗೆಜೆರಿನ ಅರಸನಾದ ಹೋರಾಮನು ಲಾಕೀಷಿನವರ ಸಹಾಯಕ್ಕೆ ಬಂದನು. ಯೆಹೋಶುವನು ಅವನನ್ನು ಮತ್ತು ಅವನ ಸೈನ್ಯವನ್ನು ಸೋಲಿಸಿದನು. ಅಲ್ಲಿ ಯಾರನ್ನೂ ಜೀವಸಹಿತ ಬಿಡಲಿಲ್ಲ.


ಅಮ್ಮೋನ್ಯ, ಕೆಫೆರ್, ಒಫ್ನೀ ಮತ್ತು ಗೆಬಾ ಎಂಬ ಹನ್ನೆರಡು ನಗರಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.


ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು