Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:3 - ಪರಿಶುದ್ದ ಬೈಬಲ್‌

3 ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೆಬ್ರೋನಿನಲ್ಲಿದ್ದ ಅರಸ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಯೇಲರ ಹಿರಿಯರೊಡನೆ ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:3
16 ತಿಳಿವುಗಳ ಹೋಲಿಕೆ  

ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.


ಯೋನಾತಾನನು ಮತ್ತು ದಾವೀದನು ಯೆಹೋವನ ಸನ್ನಿಧಿಯಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು. ನಂತರ ಯೋನಾತಾನನು ಮನೆಗೆ ಹೋದನು. ದಾವೀದನು ಹೋರೆಷಿನಲ್ಲಿ ನೆಲೆಸಿದನು.


ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.


ಅಬ್ನೇರನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ನಾನು ಹೋಗಿ ಎಲ್ಲಾ ಇಸ್ರೇಲರನ್ನೂ ನಿನ್ನ ಬಳಿಗೆ ಕರೆತರುತ್ತೇನೆ; ನಂತರ ಅವರು ನಿನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಳ್ಳುತ್ತಾರೆ. ನೀನು ನಿನ್ನ ಇಷ್ಟದಂತೆ ಸಮಸ್ತ ಇಸ್ರೇಲನ್ನು ಆಳಬಹುದು” ಎಂದು ಹೇಳಿದನು. ದಾವೀದನು ಅಬ್ನೇರನನ್ನು ಕಳುಹಿಸಿದನು. ಅಬ್ನೇರನು ಸಮಾಧಾನದಿಂದ ಹೋದನು.


ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೊರಟುಹೋದನು. ಅವರು ಯೆಫ್ತಾಹನನ್ನು ತಮ್ಮ ನಾಯಕನನ್ನಾಗಿಯೂ ಸೇನಾಧಿಪತಿಯನ್ನಾಗಿಯೂ ಮಾಡಿದರು. ಯೆಫ್ತಾಹನು ಮಿಚ್ಛೆ ನಗರದಲ್ಲಿ ಯೆಹೋವನ ಸಮ್ಮುಖದಲ್ಲಿ ತನ್ನ ಎಲ್ಲಾ ಮಾತುಗಳನ್ನು ಮತ್ತೊಮ್ಮೆ ಹೇಳಿದನು.


“ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”


ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು.


ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಆ ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ಈ ವಾಗ್ದಾನವನ್ನು ಮಾಡಿದ್ದನು.


ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.


ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.


ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ಎಗ್ಲೋನಿನಿಂದ ಹೆಬ್ರೋನಿಗೆ ಪ್ರಯಾಣ ಮಾಡಿ ಹೆಬ್ರೋನಿನ ಮೇಲೆ ಧಾಳಿಮಾಡಿದರು.


ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.


ಎಲ್ಲಾ ಇಸ್ರೇಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವು ನಿನ್ನ ಸಂತತಿಯವರು.


ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿಸಿದನು.


“ಇಸ್ರೇಲರ ದೇವರಾದ ಯೆಹೋವನು ಇಸ್ರೇಲರ ಹನ್ನೆರಡು ಕುಲಗಳನ್ನು ಮುನ್ನಡೆಸಲು ಯೆಹೂದ ಕುಲವನ್ನು ಆರಿಸಿಕೊಂಡಿದ್ದಾನೆ. ಆ ಕುಲದಿಂದ ದೇವರು ನನ್ನ ತಂದೆಯ ಕುಟುಂಬವನ್ನು ಆರಿಸಿದ್ದಾನೆ; ಆ ಕುಟುಂಬದಿಂದ ದೇವರು ಇಸ್ರೇಲರ ಅರಸನನ್ನಾಗಿ ನನ್ನನ್ನು ಆರಿಸಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು