Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:5 - ಪರಿಶುದ್ದ ಬೈಬಲ್‌

5 ಅವನು ಏಳು ವರ್ಷ ಆರು ತಿಂಗಳ ಕಾಲ ಹೆಬ್ರೋನಿನಲ್ಲಿದ್ದು ಯೆಹೂದ್ಯರನ್ನು ಆಳಿದನು. ಅವನು ಮೂವತ್ತಮೂರು ವರ್ಷ ಜೆರುಸಲೇಮಿನಲ್ಲಿದ್ದು ಸಮಸ್ತ ಇಸ್ರೇಲನ್ನು ಮತ್ತು ಯೆಹೂದವನ್ನು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದ ಕುಲ ಒಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು; ಜೆರುಸಲೇಮಿನಲ್ಲಿದ್ದುಕೊಂಡು ಯೆಹೂದ್ಯರನ್ನು ಹಾಗು ಇಸ್ರಯೇಲರನ್ನು ಆಳಿದ್ದು ಮೂವತ್ತಮೂರು ವರ್ಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದಕುಲವೊಂದನ್ನೇ ಆಳಿದ್ದು ಏಳು ವರುಷವೂ ಆರು ತಿಂಗಳೂ; ಯೆರೂಸಲೇವಿುನಲ್ಲಿದ್ದುಕೊಂಡು ಯೆಹೂದ್ಯರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಆಳಿದ್ದು ಮೂವತ್ತುಮೂರು ವರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಹೆಬ್ರೋನಿನಲ್ಲಿ ಯೆಹೂದದ ಮೇಲೆ ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲರ ಮೇಲೆಯೂ, ಸಮಸ್ತ ಯೆಹೂದದ ಜನರ ಮೇಲೆಯೂ ಮೂವತ್ತು ಮೂರು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:5
7 ತಿಳಿವುಗಳ ಹೋಲಿಕೆ  

ದಾವೀದನು ಯೆಹೂದ ಕುಲದವರಿಗೆ ಹೆಬ್ರೋನಿನಲ್ಲಿ ಏಳು ವರ್ಷ ಆರು ತಿಂಗಳುಗಳ ಕಾಲ ರಾಜನಾಗಿದ್ದನು.


ಈ ಆರು ಮಂದಿ ಮಕ್ಕಳು ದಾವೀದನಿಗೆ ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನು ಅಲ್ಲಿ ಏಳುವರೆ ವರ್ಷ ಆಳಿದನು. ದಾವೀದನು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಅರಸನಾಗಿದ್ದನು.


ದಾವೀದನು ಇಸ್ರೇಲನ್ನು ನಲವತ್ತು ವರ್ಷಗಳ ಕಾಲ ಆಳಿದನು. ಅವನು ಏಳು ವರ್ಷ ಹೆಬ್ರೋನಿನಲ್ಲೂ ಮೂವತ್ತಮೂರು ವರ್ಷ ಜೆರುಸಲೇಮಿನಲ್ಲೂ ಆಡಳಿತ ನಡೆಸಿದನು.


ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.


ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಆ ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ಈ ವಾಗ್ದಾನವನ್ನು ಮಾಡಿದ್ದನು.


ಅವನ ಕುಟುಂಬವನ್ನೂ ಅವನ ಪತ್ನಿಯರನ್ನೂ ನಿನಗೆ ಕೊಟ್ಟವನು ನಾನೇ. ನಿನ್ನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಮಾಡಿದವನು ನಾನೇ. ಅದು ಸಾಲದು ಎನ್ನುವಂತೆ, ನಾನು ಮತ್ತಷ್ಟು ಹೆಚ್ಚಿನದನ್ನೂ ನೀಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು