Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:7 - ಪರಿಶುದ್ದ ಬೈಬಲ್‌

7 ಆದರೆ ದಾವೀದನು ಚೀಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಈ ಕೋಟೆಗೆ ದಾವೀದ ನಗರವೆಂದು ಹೆಸರಾಯಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರೂ ದಾವೀದನು ದಾವೀದನಗರ ಎನ್ನಿಸಿಕೊಳ್ಳುವ ಚೀಯೋನಿನ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೂ ಅವನು, ಈಗ ‘ದಾವೀದನಗರ’ ಎನಿಸಿಕೊಳ್ಳುವ ಸಿಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೂ ಅವನು ಈಗ ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:7
27 ತಿಳಿವುಗಳ ಹೋಲಿಕೆ  

ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.


ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು.


ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.”


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ಆಗ ಒಬ್ಬ ರಕ್ಷಕನು ಚೀಯೋನಿಗೆ ಬರುವನು. ಜನರು ಪಾಪಮಾಡಿದ್ದರೂ ದೇವರ ಬಳಿಗೆ ಹಿಂತಿರುಗಿ ಬಂದ ಯಾಕೋಬನ ಜನರ ಬಳಿಗೆ ಆತನು ಬರುವನು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಯೆಹೋವನು ತನ್ನ ಆಲಯಕ್ಕಾಗಿ ಚೀಯೋನನ್ನೇ ಆರಿಸಿಕೊಂಡನು.


ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


ಚೀಯೋನಿಗೆ ಕರುಣೆತೋರಿ ಜೆರುಸಲೇಮಿನ ಕೋಟೆಗಳನ್ನು ಮತ್ತೆ ನಿರ್ಮಿಸು.


ಚೀಯೋನಿನ ಸುತ್ತಲೂ ಸಂಚರಿಸಿ, ಆ ಪಟ್ಟಣವನ್ನು ನೋಡಿರಿ. ಅದರ ಬುರುಜುಗಳನ್ನು ಎಣಿಸಿರಿ.


ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ಅವನ ದೇಹವನ್ನು ದಾವೀದ ನಗರದಲ್ಲಿ ಅರಸುಗಳ ಸಮಾಧಿಯ ಬಳಿಯಲ್ಲಿ ಸಮಾಧಿ ಮಾಡಿದರು. ಯಾಕೆಂದರೆ ಅವನು ಜೀವಂತನಾಗಿದ್ದಾಗ ಇಸ್ರೇಲಿನ ದೇವರಿಗೂ ಆತನ ಆಲಯಕ್ಕೂ ಒಳ್ಳೆಯದನ್ನೇ ಮಾಡಿದ್ದನು.


ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು.


ದಾವೀದನು ಕೋಟೆಯೊಳಗೆ ತನಗೆ ಮನೆ ಮಾಡಿಕೊಂಡನು. ಆದ್ದರಿಂದ ಅದಕ್ಕೆ ದಾವೀದನಗರ ಎಂಬ ಹೆಸರು ಬಂತು.


ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದ ನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅಪೇಕ್ಷೆಯಾಗಿತ್ತು.


ಸೊಲೊಮೋನನು ಈಜಿಪ್ಟಿನ ರಾಜನಾದ ಫರೋಹನ ಮಗಳನ್ನು ಮದುವೆಯಾಗಿ ಅವನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಸೊಲೊಮೋನನು ಅವಳನ್ನು ದಾವೀದನಗರಕ್ಕೆ ಕರೆದು ತಂದನು. ಸೊಲೊಮೋನನು ಆ ಸಮಯದಲ್ಲಿ ತನ್ನ ಅರಮನೆಯನ್ನು ಮತ್ತು ಯೆಹೋವನ ದೇವಾಲಯಗಳನ್ನು ನಿರ್ಮಿಸುತ್ತಿದ್ದನು. ಜೆರುಸಲೇಮಿನ ಸುತ್ತಲೂ ಒಂದು ಗೋಡೆಯನ್ನು ಸಹ ಸೊಲೊಮೋನನು ನಿರ್ಮಿಸುತ್ತಿದ್ದನು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್‌ನ ಓಬೇದೆದೋಮನ ಮನೆಯಲ್ಲಿಟ್ಟನು.


ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ದಾವೀದನು ತನ್ನ ಜನರಿಗೆ ಅಂದು, “ನೀವು ಯೆಬೂಸಿಯರನ್ನು ಸೋಲಿಸಬೇಕೆಂದಿದ್ದರೆ ಜಲಮಾರ್ಗದ ಮೂಲಕ ಹೋಗಿ ಶತ್ರುಗಳಾದ ಕುಂಟರು ಮತ್ತು ಕುರುಡರನ್ನು ಎದುರಿಸಿ” ಎಂದು ಹೇಳಿದನು. ಆದ್ದರಿಂದಲೇ “ಕುರುಡರು ಮತ್ತು ಕುಂಟರು ಮನೆಯೊಳಕ್ಕೆ ಬರಲಾಗದು” ಎಂಬ ನಾಣ್ಣುಡಿ ಉಂಟಾಯಿತು.


ಫರೋಹನ ಮಗಳು ದಾವೀದ ನಗರವನ್ನು ಬಿಟ್ಟು ಸೊಲೊಮೋನನು ಅವಳಿಗಾಗಿ ಕಟ್ಟಿಸಿದ ದೊಡ್ಡ ಮನೆಗೆ ಹೋದಳು. ಆಗ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.


“ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ.


ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು.


ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು