Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:1 - ಪರಿಶುದ್ದ ಬೈಬಲ್‌

1 ಇಸ್ರೇಲಿನಲ್ಲಿ ಆರಿಸಲ್ಪಟ್ಟ ಮೂವತ್ತು ಸಾವಿರ ಮಂದಿಯನ್ನು ದಾವೀದನು ಮತ್ತೆ ಒಟ್ಟುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪುನಃ ದಾವೀದನು ಇಸ್ರಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ದೇವರ ಮಂಜೂಷವನ್ನು ತರುವುದಕ್ಕಾಗಿ ಅವರೆಲ್ಲರ ಸಹಿತ ಜುದೇಯ ನಾಡಿನ ಬಾಳಾ ಎಂಬಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ದಾವೀದನು ಇಸ್ರಾಯೇಲ್ಯರಲ್ಲಿ ಮೂವತ್ತುಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ಇಸ್ರಾಯೇಲಿನಲ್ಲಿ ಆರಿಸಿದ ಮೂವತ್ತು ಸಾವಿರ ಸೈನಿಕರನ್ನು ಕೂಡಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:1
7 ತಿಳಿವುಗಳ ಹೋಲಿಕೆ  

ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದ ನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅಪೇಕ್ಷೆಯಾಗಿತ್ತು.


ಆಗ ಇಸ್ರೇಲಿನ ಕುಲಗಳವರೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವೆಲ್ಲಾ ಒಂದೇ ಕುಲದವರಾಗಿದ್ದೇವೆ.


ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದುತಂದ ವಸ್ತುಗಳನ್ನು ತೆಗೆದುಕೊ; ಆನೇರ್, ಎಷ್ಕೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಈ ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು.


ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು