Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:10 - ಪರಿಶುದ್ದ ಬೈಬಲ್‌

10 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್‌ನ ಓಬೇದೆದೋಮನ ಮನೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದನ್ನು ದಾವೀದ ನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನು ಯೆಹೋವ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:10
11 ತಿಳಿವುಗಳ ಹೋಲಿಕೆ  

ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು.


ಲೇವಿಯರ ಇನ್ನೊಂದು ಗುಂಪು ಇತ್ತು. ಅವರು ಯಾರೆಂದರೆ: ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರೆಲ್ಲಾ ಲೇವಿಯರ ಕಾವಲುಗಾರರಾಗಿದ್ದರು.


ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.


ರಾಜನು ಗತ್‌ನ ಇತ್ತೈಯನಿಗೆ, “ನೀನು ಸಹ ನಮ್ಮೊಂದಿಗೆ ಏಕೆ ಬರುತ್ತಿರುವೆ? ಹಿಂದಿರುಗಿಹೋಗಿ, ಹೊಸ ರಾಜನೊಂದಿಗೆ ನೆಲೆಸು. ನೀನು ಹೊರದೇಶೀಯನು. ಇದು ನಿನ್ನ ಸ್ವದೇಶವಲ್ಲ.


ಬೇರೋತಿನ ಜನರು ಗಿತ್ತಯಿಮಿಗೆ ಓಡಿಹೋದರು. ಅವರು ಇವತ್ತಿನವರೆಗೂ ಅಲ್ಲಿ ನೆಲೆಸಿದ್ದಾರೆ.


ಯೆಹುದ್, ಬೆನೇಬೆರಕ್, ಗತ್‌ರಿಮ್ಮೋನ್,


ಆದರೆ ದಾವೀದನು ಚೀಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಈ ಕೋಟೆಗೆ ದಾವೀದ ನಗರವೆಂದು ಹೆಸರಾಯಿತು.)


ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಇವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವಾಗ ತುತ್ತೂರಿ ಊದುವ ಕೆಲಸವನ್ನು ಕೊಟ್ಟನು. ಓಬೇದೆದೋಮ್ ಮತ್ತು ಯೆಹೀಯ ಒಡಂಬಡಿಕೆಯ ಪೆಟ್ಟಿಗೆಗೆ ಕಾವಲುಗಾರರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು