Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:14 - ಪರಿಶುದ್ದ ಬೈಬಲ್‌

14 ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡು, ತನ್ನ ಪೂರ್ಣಬಲದಿಂದ ಯೆಹೋವ ದೇವರ ಮುಂದೆ ಕುಣಿದಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:14
20 ತಿಳಿವುಗಳ ಹೋಲಿಕೆ  

ಆದರೆ ಬಾಲಕನಾದ ಸಮುವೇಲನು ಏಫೋದ್ ಎಂಬ ನಾರುಬಟ್ಟೆಯನ್ನು ಧರಿಸಿ ಯೆಹೋವನ ಸೇವೆ ಮಾಡುತ್ತಿದ್ದನು.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.


ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ.


ಯೆಫ್ತಾಹನು ಮಿಚ್ಛೆಗೆ ಹಿಂದಿರುಗಿದನು. ಯೆಫ್ತಾಹನು ತನ್ನ ಮನೆಗೆ ಹೋಗುತ್ತಿರಲು ಅವನನ್ನು ಎದುರುಗೊಳ್ಳಲು ಅವನ ಮಗಳು ಮನೆಯಿಂದ ಹೊರಗೆ ಬಂದಳು. ಅವಳು ದಮ್ಮಡಿ ಬಡಿಯುತ್ತ ನಾಟ್ಯವಾಡುತ್ತಿದ್ದಳು. ಅವಳು ಅವನ ಒಬ್ಬಳೇ ಮಗಳಾಗಿದ್ದಳು. ಯೆಫ್ತಾಹನಿಗೆ ಬೇರೆ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇರಲಿಲ್ಲ. ಯೆಫ್ತಾಹನು ಅವಳನ್ನು ತುಂಬ ಪ್ರೀತಿಸುತ್ತಿದ್ದನು.


ಎಲ್ಲಾ ಕಾರ್ಯಗಳನ್ನು ನಿಮ್ಮಿಂದಾದಷ್ಟು ಅತ್ಯುತ್ತಮವಾಗಿಯೇ ಮಾಡಿರಿ. ಯಾವುದೇ ಕಾರ್ಯವನ್ನಾಗಲಿ ಜನರಿಗಾಗಿ ಮಾಡದೆ ಪ್ರಭುವಿಗಾಗಿ ಮಾಡಿರಿ.


ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.


ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು.


“ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಗೆ ಬರುತ್ತಿದ್ದಾಗ ವಾದ್ಯಗೋಷ್ಠಿಯ ಮತ್ತು ನೃತ್ಯದ ಶಬ್ದವನ್ನು ಕೇಳಿದನು.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತ ಯಾಜಕರು ಉತ್ತಮವಾದ ನಾರಿನ ನಿಲುವಂಗಿಗಳನ್ನು ಧರಿಸಿದ್ದರು. ಕೆನನ್ಯನೂ ಅವನ ಜೊತೆಯಲ್ಲಿದ್ದ ಗಾಯಕರೆಲ್ಲರೂ ಉತ್ತಮವಾದ ನಾರಿನ ಬಟ್ಟೆಗಳನ್ನು ಧರಿಸಿದ್ದರು. ದಾವೀದನೂ ಉತ್ತಮವಾದ ನಾರಿನ ಬಟ್ಟೆ ಧರಿಸಿ, ಉತ್ತಮವಾದ ನಾರಿನಿಂದ ಮಾಡಿದ ಏಫೋದನ್ನು ಅದರ ಮೇಲೆ ಧರಿಸಿಕೊಂಡಿದ್ದನು.


ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ಆ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು.


ಉತ್ಸವಕಾಲದಲ್ಲಿ ಶೀಲೋವಿನ ಯುವತಿಯರು ನಾಟ್ಯಕ್ಕೆ ಬರುವ ಸಮಯವನ್ನು ನಿರೀಕ್ಷಿಸುತ್ತಿರಿ. ಅವರು ಬಂದ ತಕ್ಷಣ ನೀವು ಅಡಗಿಕೊಂಡಿದ್ದ ಸ್ಥಳದಿಂದ ಹೊರಗೆ ಬನ್ನಿ; ನಿಮ್ಮಲ್ಲಿ ಪ್ರತಿಯೊಬ್ಬನು ಒಬ್ಬೊಬ್ಬ ಶೀಲೋವಿನ ಯುವತಿಯನ್ನು ತೆಗೆದುಕೊಳ್ಳಿರಿ. ಆ ಯುವತಿಯರನ್ನು ಬೆನ್ಯಾಮೀನ್ಯರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಿರಿ.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.


ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…”


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಗರಕ್ಕೆ ತರುವಾಗ ದಾವೀದನು ಮತ್ತು ಇಸ್ರೇಲರೆಲ್ಲರು ಸಂತೋಷದಿಂದ ಆರ್ಭಟಿಸಿದರು; ತುತ್ತೂರಿಯನ್ನು ಊದಿದರು.


ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ಈ ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದು ಹಾಕಿದೆಯಲ್ಲ” ಎಂದಳು.


ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು.


ರಾಜನು ತನ್ನ ಜನರೊಂದಿಗೆ ಇರಬೇಕು. ಜನರು ಒಳಗೆ ಪ್ರವೇಶ ಮಾಡುವಾಗ ಅವನೂ ಅವರ ಜೊತೆಯಲ್ಲಿರಬೇಕು. ಅವರು ಹೊರಗೆ ಹೋಗುವಾಗಲೂ ಅವನು ಅವರ ಜೊತೆಯಲ್ಲಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು