2 ಸಮುಯೇಲ 6:16 - ಪರಿಶುದ್ದ ಬೈಬಲ್16 ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಿಕಿ ನೋಡಿ ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ ಕುಣಿಯುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಅರಸನಾದ ದಾವೀದನು ಯೆಹೋವ ದೇವರ ಮುಂದೆ ಕುಣಿದಾಡುವುದನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು. ಅಧ್ಯಾಯವನ್ನು ನೋಡಿ |
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.