2 ಸಮುಯೇಲ 6:19 - ಪರಿಶುದ್ದ ಬೈಬಲ್19 ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸಭೆಯಾಗಿ ನೆರೆದು ಬಂದಿರುವ ಇಸ್ರಾಯೇಲ್ಯರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇ ಹಣ್ಣಿನ ಉಂಡೆಯನ್ನೂ ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೆರೆದುಬಂದ ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ಅಧ್ಯಾಯವನ್ನು ನೋಡಿ |
ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”